Sunday, January 26, 2025
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಎಸ್ ಡಿಎಂ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ. ಬಿ.ಯಶೋವರ್ಮ ವಿಧಿವಶ! – ಕಹಳೆ ನ್ಯೂಸ್

ಮಂಗಳೂರು (ಮೇ. 23): ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದ, ಪ್ರಸ್ತುತ ಎಸ್ ಡಿಎಂ ಎಜುಕೇಶನ್ ಸೊಸೈಟಿ ಕಾರ್ಯದರ್ಶಿಯಾಗಿದ್ದ ಡಾ. ಬಿ.ಯಶೋವರ್ಮ ದೀರ್ಘಕಾಲದ ಅನಾರೋಗ್ಯದಿಂದಾಗಿ ಭಾನುವಾರ ನಿಧನರಾದರು.

ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯದ ಕಾರಣಕ್ಕಾಗಿ ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 66 ವರ್ಷದ ಯಶೋವರ್ಮ ಅವರು ಭಾನುವಾರ ಮಧ್ಯರಾತ್ರಿ ಚಿಕಿತ್ಸೆ ಫಲಿಸದೆ ನಿಧರಾಗಿದ್ದಾರೆ. ಈ ಕುರಿತಂತೆ ಶ್ರೀ ಧರ್ಮಸ್ಥಳ ಇನ್ನಷ್ಟೇ ಅಧಿಕೃತವಾಗಿ ಪ್ರಕಟಣೆ ನೀಡಬೇಕಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಡಾ. ಬಿ.ಯಶೋವರ್ಮ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಪತ್ನಿ, ಡಾ. ಹೇಮಾವತಿ ಹೆಗ್ಗಡೆಯವರ ಸಹೋದರರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು