Friday, January 24, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ : ಹೊಂಡದಲ್ಲಿ ಸಿಲುಕಿದ ಕಂಟೈನರ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್- ಕಹಳೆ ನ್ಯೂಸ್

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭಾರಿ ಗಾತ್ರದ ಎರಡು ಸರಕು ಸಾಗಣೆ ವಾಹನಗಳು ಹೊಂಡದಲ್ಲಿ ಸಿಲುಕಿದ ಪರಿಣಾಮ ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾದ ಘಟನೆ ಮಂಗಳೂರು-ಬೆಂಗಳೂರು ರಸ್ತೆಯ ಉಪ್ಪಿನಂಗಡಿ ಬಳಿಯ ಕರ್ವೆಲ್ ಎಂಬಲ್ಲಿ ನಡೆದಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಭಾರಿ ಗಾತ್ರದ ಕಂಟೈನರ್ ರಸ್ತೆಯ ಬದಿಯ ಹೊಂಡದಲ್ಲಿ ಸಿಲುಕಿತ್ತು. ಬೆನ್ನಲ್ಲೇ ಅದೇ ಮಾರ್ಗದಲ್ಲಿ ಬಂದ ಮತ್ತೊಂದು ಕಂಟೈನರ್ ಇನ್ನೊಂದು ಬದಿಯಲ್ಲಿ ಸಿಲುಕಿದ ಪರಿಣಾಮ ಒಂದು ಗಂಟೆಗೂ ಹೆಚ್ಚು ಕಾಲ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಹೆದ್ದಾರಿ ಬದಿಯ ಹೊಂಡ ತುಂಬಾ ದಿನಗಳಿಂದ ಅಪಾಯವನ್ನು ಆಹ್ವಾನಿಸುತ್ತಿತ್ತು. ಈ ಸಂಬಂಧ ಸ್ಥಳೀಯರು ಹೆದ್ದಾರಿ ಪ್ರಾಧಿಕಾರ ಹಾಗೂ ಪೆÇಲೀಸರಿಗೆ ಮಾಹಿತಿ ನೀಡಿದ್ದರೂ ಯಾವುದೇ ಕ್ರಮಕೈಗೊಂಡಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಇವತ್ತು ಅವಘಡ ಸಂಭವಿಸಿದ್ದರಿಂದ ಸ್ಥಳೀಯ ಜನರು ಹಾಗೂ ವಾಹನ ಸವಾರರು ಆಕ್ರೋಶ ವ್ಯಕ್ತಪಡಿದ್ದಾರೆ. ಟ್ರಾಫಿಕ್ ಸಮಸ್ಯೆಯನ್ನು ಬಗೆಹರಿಸಿದ ಸ್ಥಳೀಯ ಯುವಕರು ಹೊಂಡಕ್ಕೆ ಮಣ್ಣು ಮುಚ್ಚಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು