Recent Posts

Sunday, January 19, 2025
ದಕ್ಷಿಣ ಕನ್ನಡಸುದ್ದಿ

ಮತ್ತೆ ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರು : ಪ್ರವೇಶ ನಿರಾಕರಿಸಿದ ಕಾಲೇಜು ಪ್ರಾಂಶುಪಾಲರು – ಕಹಳೆ ನ್ಯೂಸ್

ಮಂಗಳೂರು: ಕಾಲೇಜಿಗೆ 12 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಆಗಮಿಸಿದ್ದು, ಈ ವೇಳೆ ಪ್ರಾಂಶುಪಾಲೆ ಡಾ.ಅನುಸೂಯ ರೈ ತರಗತಿಗೆ ಬಾರದಂತೆ ಪ್ರವೇಶ ನಿರಾಕರಿಸಿದ ಘಟನೆ ನಗರದ ವಿವಿ ಘಟಕ ಕಾಲೇಜಿನಲ್ಲಿ ನಡೆದಿದೆ.

ಇಂದು ಕೂಡ ವಿದ್ಯಾರ್ಥಿನಿಯರು ಕಾಲೇಜಿಗೆ ಹಿಜಾಬ್ ಧರಸಿ ಬಂದಿದ್ದಾರೆ. ಆದರೆ ಪ್ರಾಂಶುಪಾಲರು ತರಗತಿಗೆ ಬಾರದಂತೆ ಪ್ರವೇಶ ನಿರಾಕರಿಸಿದ್ದು, ಬಳಿಕ ವಿದ್ಯಾರ್ಥಿನಿಯರು ಕಾಲೇಜು ಗ್ರಂಥಾಲಯದತ್ತ ತೆರಳಿದರು. ಅಲ್ಲೂ ವಿದ್ಯಾರ್ಥಿನಿಯರನ್ನು ತಡೆಯಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಶುಕ್ರವಾರ ಕಾಲೇಜು ಅಭಿವೃದ್ಧಿ ಸಮಿತಿ ಸಭೆಯಲ್ಲಿ ಯಾವುದೇ ಕಾರಣಕ್ಕೂ ಕಾಲೇಜಿಗೆ ಹಿಜಾಬ್ ಧರಿಸಿ ಪ್ರವೇಶ ಇಲ್ಲ. ಕಾಲೇಜು ಕ್ಯಾಂಪಸ್ ಗೆ ಹಿಜಾಬ್ ಹಾಕಿಕೊಂಡು ಬರಬಹುದು. ಆದರೆ ತರಗತಿ, ಲೈಬ್ರೆರಿ ಸೇರಿ ಯಾವುದೇ ತರಗತಿಗೆ ಹಾಕಲು ಅವಕಾಶ ಇಲ್ಲ ಎಂದು ಮಂಗಳೂರು ವಿವಿ ಉಪಕುಲಪತಿ ಡಾ.ಸುಬ್ರಹ್ಮಣ್ಯ ಯಡಪಡಿತ್ತಾಯ ಹೇಳಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು