ಪಿಯುಸಿ ನಂತರ ಮುಂದೇನು…..? ಗೊಂದಲದಲ್ಲಿರುವ ವಿದ್ಯಾರ್ಥಿಗಳು ಮತ್ತು ಪೋಷಕರಿಗೊಂದು ಪುತ್ತೂರಿನಲ್ಲಿ ಸಂಪೂರ್ಣ ಮಾಹಿತಿ ಕಾರ್ಯಾಗಾರ- ಕಹಳೆ ನ್ಯೂಸ್
ಪುತ್ತೂರು : ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ‘ವಿದ್ಯಾಮಾತಾ ಅಕಾಡೆಮಿ’ ಪುತ್ತೂರು ಇದರ ವತಿಯಿಂದ ಜೂ. 5 ರಂದು ಪಿಯುಸಿ ವಿದ್ಯಾಭ್ಯಾಸದ ನಂತರ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಯಾವ ರೀತಿಯ ಶಿಕ್ಷಣವನ್ನು ಪಡೆಯಬೇಕು ಮತ್ತು ಲಭ್ಯವಿರುವ ಉದ್ಯೋಗ ಅವಕಾಶಗಳು ಹಾಗೂ ವಿದ್ಯಾರ್ಥಿವೇತನಗಳ ಬಗ್ಗೆ ಸಂಪೂರ್ಣ ಮಾಹಿತಿ ಕಾರ್ಯಗಾರ ನಡೆಯಲಿದೆ.
ಕಾರ್ಯಕ್ರಮವನ್ನು ಪುತ್ತೂರು ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ‘ಶ್ರೀ ನವೀನ್ ಭಂಡಾರಿ’ ಉದ್ಘಾಟಿಸಲಿದ್ದು, ಸಂಪನ್ಮೂಲ ವ್ಯಕ್ತಿಗಳಾಗಿ ‘ಡಾ.ಶರಣ್ ಕುಮಾರ್ ಶೆಟ್ಟಿ’ ಮತ್ತು ‘ಸತೀಶ್ ಭಟ್’ ರವರು ಆಗಮಿಸಲಿದ್ದಾರೆ.
ಕಾರ್ಯಾಗಾರದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಜೂನ್ 3 ರ ಒಳಗಾಗಿ ಮೊಬೈಲ್ ನಂಬರ್ 9148935808 ಗೆ ನಿಮ್ಮ ಹೆಸರು ಮತ್ತು ಮೊಬೈಲ್ ನಂಬರನ್ನು ವಾಟ್ಸಪ್ ಮಾಡಬಹುದು.
ಹೆಚ್ಚಿನ ಮಾಹಿತಿಗಾಗಿ
ವಿದ್ಯಾಮಾತಾ ಅಕಾಡೆಮಿ, ಹಿಂದೂಸ್ತಾನ್ ಕಾಂಪ್ಲೆಕ್ಸ್, ಒಂದನೇ ಮಹಡಿ, APMC ರಸ್ತೆ, ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು ದ.ಕ 574201
ಮೊಬೈಲ್ ಸಂಖ್ಯೆ : 9620468869 / 8590773486 ನ್ನು ಸಂಪರ್ಕಿಸಿ…