Monday, January 20, 2025
ದಕ್ಷಿಣ ಕನ್ನಡಸುದ್ದಿ

ಮಂಗಳೂರು : ಅಳಕೆಯಲ್ಲಿರುವ ಕುದ್ರು ಡೆಸ್ಟಿನ್ ಹೋಟೆಲಿಗೆ ರಾಜ್ಯ ಗೃಹ ಸಚಿವರಾದ ಅರಗ ಜ್ಞಾನೇಂದ್ರ ಭೇಟಿ – ಕಹಳೆ ನ್ಯೂಸ್

ಮಂಗಳೂರು ನಗರದ ಅಳಕೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಕುದ್ರು ಡೆಸ್ಟಿನ್ ಹಾಸ್ಪಿಟಾಲಿಟಿ ಪ್ರೈವೇಟ್ ಲಿಮಿಟೆಡ್ ಗೆ ರಾಜ್ಯ ಗೃಹ ಸಚಿವರಾದ ಅರಗ ಜ್ಞಾನೇಂದ್ರ ಅವರು ಭೇಟಿ ನೀಡಿದ್ದಾರೆ.

ಅಲ್ಲಿನ ವ್ಯವಸ್ಥೆ ಹಾಗೂ ಸೌಲಭ್ಯಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಗೃಹ ಸಚಿವರು ಅತೀ ವೇಗದಲ್ಲಿ ಬೆಳೆಯುತ್ತಿರುವ ಮಂಗಳೂರಿನಲ್ಲಿ ಉದ್ಯಮಶೀಲತೆಯನ್ನು ಬೆಳೆಸಲು ತರುಣರು ಮುಂದಾಗಬೇಕು ಎಂದು ಶುಭ ಹಾರೈಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ. ವೇದವ್ಯಾಸ್ ಕಾಮತ್, ಕುದ್ರು ಡೆಸ್ಟಿನ್ ಮಾಲಕರಾದ ನಂದನ್ ಶೆಣೈ, ಸ್ಥಳೀಯ ಕಾರ್ಪೋರೇಟರ್ ಜಯಶ್ರೀ ಕುಡ್ವ, ಬಿಜೆಪಿ ಮಂಡಲ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ, ಉದ್ಯಮಿಗಳಾದ ಮಂಗಲ್ಪಾಡಿ ನರೇಶ್ ಶೆಣೈ, ರಮೇಶ್ ಮಲ್ಯ, ದೇವಾನಂದ ಪೈ, ಮಾಜಿ ಉಪ ಮೇಯರ್ ರಾಜೇಂದ್ರ ಕುಮಾರ್, ಬಿಜೆಪಿ ಮುಖಂಡರಾದ ರಮೇಶ್ ಹೆಗ್ಡೆ, ಶ್ರೀಕಾಂತ್ ಶೆಣೈ, ಜನಾರ್ದನ್ ಕುಡ್ವ ಮತ್ತಿತರರು ಉಪಸ್ಥಿತರಿದ್ದರು.