Monday, January 20, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಟ್ಲ: ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಪ್ರಕರಣ; ಸಿಐಡಿ ತನಿಖೆ ಆಗ್ರಹಿಸಿ ವಿ.ಹಿಂ.ಪ ಜಿಲ್ಲಾ ಉಸ್ತುವಾರಿ ಸಚಿವರಿಗೆ ನೀಡಿದ್ದ ಮನವಿಗೆ ಸ್ಪಂದನೆ : ಸೂಕ್ತ ಕ್ರಮಕ್ಕಾಗಿ ಜಿಲ್ಲಾಧಿಕಾರಿಗೆ ಸಚಿವರಿಂದ ಮನವಿ- ಕಹಳೆ ನ್ಯೂಸ್

ವಿಟ್ಲ: ಇತ್ತೀಚಿಗೆ ಕನ್ಯಾನದಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಬಾಲಕಿ ಲವ್ ಜಿಹಾದ್‍ಗೆ ಬಲಿಯಾಗಿದ್ದಾಳೆ ಎಂದು ಆರೋಪಿಸಿ ಈ ಪ್ರಕರಣವನ್ನು ಸಿಐಡಿಗೆ ಒಪ್ಪಿಸುವಂತೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ವಿಟ್ಲ ಪ್ರಖಂಡ ಆಗ್ರಹಿತ್ತು. ಈ ಬಗ್ಗೆ ಕರ್ನಾಟಕ ಸರಕಾರದ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖಾ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ವಿ ಸುನಿಲ್ ಕುಮಾರ್‍ರನ್ನು ಭೇಟಿ ಮಾಡಿದ ವಿಶ್ವ ಹಿಂದೂ ಪರಿಷತ್‍ನ ಪ್ರಮುಖರು ಅಪ್ರಾಪ್ತ ಬಾಲಕಿ ಆತ್ಮಿಕಾ ಸಾವು ಬಗ್ಗೆ ಸಿಐಡಿ ತನಿಖೆಗೆ ಆಗ್ರಹಿಸಿ ಹಾಗೂ ಕುಟುಂಬಕ್ಕೆ ಪರಿಹಾರ ಒದಗಿಸುವ ಬಗ್ಗೆ ಮನವಿಯನ್ನು ನೀಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಮನವಿಯನ್ನು ಪುರಸ್ಕರಿಸಿದ ಸಚಿವರು ತನಗೆ ಸಲ್ಲಿಸಿದ ಮನವಿಯನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಅವರಿಗೆ ಸೂಕ್ತ ಕ್ರಮಕ್ಕಾಗಿ ಕಳುಹಿಸಲಾಗಿದೆ. ಪೂರಕ ದಾಖಲೆಗಳೊಂದಿಗೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಿದ್ದೇನೆ ಎಂದು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ