Sunday, January 19, 2025
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರ ಆಮಾನತ್ತು ಖಂಡಿಸಿ ಮುಸ್ಲಿಂ ವಿದ್ಯಾರ್ಥಿಗಳ ಪ್ರತಿಭಟನೆ ; ವಿಡಿಯೋ ಮಾಡದಂತೆ ವರದಿಗಾರರನ್ನು ತಡೆದು ಕೋಣೆಯೊಳಗೆ ಬಂಧಿಸಿ – ಹಲ್ಲೆಗೆ ಯತ್ನಿಸಿ, ಗೂಂಡಾಗಿರಿ ನಡೆಸಿ, ವಿಕೃತಿ ಮೆರೆದ ಮುಸ್ಲಿಂ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ಉಪ್ಪಿನಂಗಡಿ: ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿ ಪ್ರಾಂಶುಪಾಲರು ಆದೇಶ ಹೊರಡಿಸಿದ ಬೆನ್ನಲ್ಲೇ ಒಂದು ಕೋಮಿನ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆ ನಡೆಯುತ್ತಿರುವ ವೇಳೆ ವರದಿ ಮಾಡಲು ಬಂದ ಮಾಧ್ಯಮ ಪ್ರತಿನಿಧಿಗಳ ಮೇಲೆ ವಿದ್ಯಾರ್ಥಿಗಳಿಂದ ಹಲ್ಲೆಗೆ ಯತ್ನಿಸಿ, ವರದಿಗಾರರನ್ನು ಕೊಠಡಿಯೊಳಗೆ ಕೂಡಿ ಹಾಕಿ ವಿಕೃತಿ ಮೆರೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವರದಿ ಮಾಡದಂತೆ ವಿದ್ಯಾರ್ಥಿಗಳು ತಾಕೀತು ಮಾಡಿದ್ದಾರೆ. ವರದಿಗಾಗಿ ಮಾಡಿದ ವಿಡಿಯೋಗಳನ್ನು ವಿದ್ಯಾರ್ಥಿಗಳು ಬಲತ್ಕಾರವಾಗಿ ಡಿಲೀಟ್ ಮಾಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹಿಜಾಬ್‌ ವಿವಾದ ಹಿನ್ನೆಲೆ ಕಾಲೇಜಿನಲ್ಲಿ ಉಪ್ಪಿನಂಗಡಿ ಪೊಲೀಸರು ಭದ್ರತೆಯ ದೃಷ್ಟಿಯಿಂದ ನಿಯೋಜಿಸಲಾಗಿದ್ದು, ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆಗೆ ಮುಂದಾದ ವಿದ್ಯಾರ್ಥಿಗಳ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ.