Sunday, November 24, 2024
ಬೆಂಗಳೂರುರಾಜಕೀಯರಾಜ್ಯಸುದ್ದಿ

ಜೂನ್ 3 ನೇ ವಾರ ರಾಜ್ಯ ಸಚಿವ ಸಂಪುಟ ಪುನಾರಚನೆ! – ಜೂನ್.16 ರಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ; ಆರಗ ಜ್ಞಾನೇಂದ್ರ-ಸುನೀಲ್ ಕುಮಾರ್ ಖಾತೆ ಅದಲು-ಬದಲು?- ಕಹಳೆ ನ್ಯೂಸ್

ಬೆಂಗಳೂರು : ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ರಾಜ್ಯಸಭೆ, ವಿಧಾನಪರಿಷತ್ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಚುನಾವಣಾ ನೀತಿ ಸಂಹಿತೆ ಸಡಿಲಗೊಂಡ ಬಳಿಕ ಜೂನ್ ಮೂರನೇ ವಾರದಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸಚಿವ ಸ್ಥಾನಕ್ಕೆ ಸಾಕಷ್ಟು ಆಕಾಂಕ್ಷಿಗಳಿದ್ದು, ಈ ಬಾರಿಯ ಸಚಿವ ಸಂಪುಟಕ್ಕೆ ಹೊಸ ಮುಖಗಳಿಗೆ ಅವಕಾಶಗಳು ಸಿಗಲಿದೆ ಎಂದು ಮೂಲಗಳು ತಿಳಿಸಿವೆ.

ಜೂನ್ 10 ರಂದು ರಾಜ್ಯಸಭೆ ಚುನಾವಣೆ ಹಾಗೂ ಜೂನ್13 ರಂದು ರಾಜ್ಯ ವಿಧಾನಪರಿಷತ್ ಚುನಾವಣೆ ನಡೆಯಲಿದೆ. ಈ ಚುನಾವಣೆಗಳ ಬಳಿಕ ಬಿಬಿಎಂಪಿ ಹಾಗೂ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗಳು ನಡೆಯಲಿವೆ. ಜೂನ್.16 ರಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದು, ಈ ವೇಳೆ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಸಂಪುಟ ಪುನರ್ ರಚನೆಯಾದರೆ ಐವರು ಸಚಿವರನ್ನು ಕೈಬಿಡುವ ಸಾಧ್ಯತೆ ಇದ್ದು, ಆರ್ ಅಶೋಕ, ಶಶಿಕಲಾ ಜೊಲ್ಲೆ, ಡಾ.ಕೆ.ಸುಧಾಕರ್ ಮತ್ತು ಎಂಟಿಬಿ ನಾಗರಾಜ್ ಅವರ ಹೆಸರು ಕೇಳಿಬರುತ್ತಿದೆ. ಪ್ರೀತಂ ಗೌಡ,  ಪೂರ್ಣಿಮಾ ಶ್ರೀನಿವಾಸ್, ತಿಪ್ಪಾರೆಡ್ಡಿ, ರಾಜುಗೌಡ, ಎನ್ ಮಹೇಶ್, ದತ್ತಾತ್ರೇಯ
ಸಿ ರೇವೂರ್ ಮತ್ತು ಅರವಿಂದ್ ಬೆಲ್ಲದ್  ಅವರನ್ನು ಸಂಪಟಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.

ಆರಗ ಜ್ಞಾನೇಂದ್ರ-ಸುನೀಲ್ ಕುಮಾರ್ ಖಾತೆ ಅದಲು-ಬದಲು?

ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಇಂಧನ ಸಚಿವ ಸುನೀಲ್ ಕುಮಾರ್ ಅವರ ಖಾತೆಗಳು ಅದಲುಬದಲಾಗುವ ಸಾಧ್ಯತೆಯಿದೆ. ಇತರ ಸಚಿವರ ಖಾತೆಗಳೂ ಬದಲಾಗಬಹುದು ಎಂದು ಮೂಲಗಳು ತಿಳಿಸಿವೆ.