Tuesday, January 21, 2025
ದಕ್ಷಿಣ ಕನ್ನಡಸುದ್ದಿ

ಮಂಗಳೂರು: ರಿವೇಂಜ್ ಗಾಗಿ ನಡೆಯಿತೇ..! ಮತ್ತೊಂದು ಮರ್ಡರ್..?: ಚಾಕುವಿನಿಂದ ಇರಿದು ಯುವಕನ ಕೊಲೆ..! – ಕಹಳೆ ನ್ಯೂಸ್

ಮಂಗಳೂರು : ರೌಡಿಶೀಟರ್ ಓರ್ವನಿಗೆ ದುಷ್ಕರ್ಮಿಗಳಿಬ್ಬರು ಚಾಕುವಿನಿಂದ ಇರಿದಿದ್ದು, ಚಿಕಿತ್ಸೆ ಫಲಕಾರಿಯಾಗದೇ ಗಾಯಾಳು ಮೃತಪಟ್ಟ ಘಟನೆ ಮಂಗಳೂರಿನ ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತಪಟ್ಟ ರೌಡಿಶೀಟರ್ ನ್ನು ಬೈಕಂಪಾಡಿ ಮೀನಕಳಿ ನಿವಾಸಿ ರಾಘವೇಂದ್ರ ಅಲಿಯಾಸ್ ರಾಜ(29) ಎಂದು ಗುರುತಿಸಲಾಗಿದ್ದು, ಸೋಮವಾರ ಸಂಜೆ ಈತ ಬೀಚ್ ನಲ್ಲಿದ್ದ ವೇಳೆ ದುಷ್ಕರ್ಮಿಗಳು ಈತನಿಗೆ ಚಾಕುವಿನಿಂದ ಇರಿದಿದ್ದಾರೆ. ಗಂಭೀರ ಗಾಯಗೊಂಡಿದ್ದ ಆತನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿದ್ದಾನೆ. ಈ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು