Tuesday, January 21, 2025
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಜೂನ್ 08ರಂದು ಬಂದಾರು ಗ್ರಾಮದ ಬೆಳಾಲು-ಬೈಪಾಡಿ, ದಡಂತಮಲೆ ರಕ್ಷಿತಾರಣ್ಯದಲ್ಲಿ ‘ಬಿತ್ತೂತ್ಸವ’ ವಿಶೇಷ ಕಾರ್ಯಕ್ರಮ- ಕಹಳೆ ನ್ಯೂಸ್

ಕರ್ನಾಟಕ ಅರಣ್ಯ ಇಲಾಖೆ, ಮಂಗಳೂರು ಪ್ರಾದೇಶಿಕ ಅರಣ್ಯ ವಿಭಾಗ, ಉಪ್ಪಿನಂಗಡಿ ವಲಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಧರ್ಮಸ್ಥಳ, ಜನಜಾಗೃತಿ ಮತ್ತು ಕೃಷಿ ಪ್ರಾದೇಶಿಕ ವಿಭಾಗ ಮತ್ತು ಗ್ರಾಮ ಅರಣ್ಯ ಸಮಿತಿ, ಬೆಳಾಲು ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ‘ಬಿತ್ತೂತ್ಸವ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜೂನ್ 08 ಬುಧವಾರದಂದು ಬಂದಾರು ಗ್ರಾಮದ ಬೆಳಾಲು-ಬೈಪಾಡಿ, ದಡಂತಮಲೆ ರಕ್ಷಿತಾರಣ್ಯದಲ್ಲಿ ಈ ಕಾರ್ಯಕ್ರಮ ನೆರವೇರಲಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಈ ವಿಶೇಷ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಶಾಸಕ ಹರೀಶ್ ಪೂಂಜಾ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಮಂಗಳೂರು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಎಸ್. ನೆಟಲ್‌ಕರ್, ಐ.ಎಫ್.ಎಸ್, ಮಂಗಳೂರು ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ, ಡಾ| ವೈ.ಕೆ. ದಿನೇಶ್ ಕುಮಾರ್ ಐ.ಎಫ್.ಎಸ್., ಶ್ರೀ.ಕ್ಷೇ.ಧ.ಗ್ರಾ.ಯೋ.ಬಿ.ಸಿ.ಟ್ರಸ್ಟ್ (ರಿ.) ಧರ್ಮಸ್ಥಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ| ಎಲ್.ಹೆಚ್. ಮಂಜುನಾಥ್, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷೆ, ಪರಮೇಶ್ವರಿ ಕೆ. ಗೌಡ, ಗಂಗಾಧರ ಗೌಡ, ಅಧ್ಯಕ್ಷರು, ಬಾಲಕೃಷ್ಣ ಗೌಡ ಸೇರಿದಂAತೆ ಇನ್ನೂ ಅನೇಕರು ಭಾಗಿಯಾಗಲಿದ್ದಾರೆ.

ಪರಿಸರ ಸಂರಕ್ಷಣೆಯ ಮಹತ್ವಾಕಾಂಕ್ಷೆಯ ಯೋಜನೆಗೆ ಅರಣ್ಯದಲ್ಲಿನ ಕಾಡು ಪ್ರಾಣಿಗಳಿಗಾಗಿ ಹಣ್ಣು ಹಂಪಲುಗಳ ಗಿಡಗಳನ್ನು ಬೆಳೆಸುವ ಉದ್ದೇಶದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ