Monday, January 20, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಸ್‌ನಲ್ಲಿ ಯುವತಿಗೆ ಲೈಗಿಂಕ ಕಿರುಕುಳ ನೀಡಿದ ಬಿ.ಸಿ ರೋಡ್‌ನ ನಿವಾಸಿ ಮಹಮ್ಮದ್ ಮುಸ್ತಾಫಾ : ಯುವತಿಯ ದೂರಿನ ಮೇರೆಗೆ ಆರೋಪಿಯ ಬಂಧನ – ಕಹಳೆ ನ್ಯೂಸ್

ಬೆಂಗಳೂರಿನಿ0ದ ಮಂಗಳೂರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಸೋಮವಾರ ನಡೆದಿತ್ತು. ಇದೀಗ ಆರೋಪಿಯನ್ನು ಬಂಧಿಸಲಾಗಿದೆ.

ಬಿ.ಸಿ ರೋಡ್‌ನ ನಿವಾಸಿ ಮಹಮ್ಮದ್ ಮುಸ್ತಾಫಾ ಬಂಧಿತ ಆರೋಪಿ. ಯುವತಿ ಸೋಮವಾರ ರಾತ್ರಿ ಬೆಂಗಳೂರಿನಿAದ ಮಂಗಳೂರು ಕಡೆಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿರುವ ವೇಳೆ ಮುಸ್ತಾಫಾ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ವೇಳೆ ಯುವತಿಗೆ ಹಾಗೂ ಸಹ ಪ್ರಯಾಣಿಕರಿಗೆ ಜೀವ ಬೆದರಿಕೆ ಹಾಕಿದ್ದ.
ಈ ಕುರಿತು ಯುವತಿ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಮುಸ್ತಾಫಾ ಬೆಂಗಳೂರಿನಲ್ಲಿ ಚಪ್ಪಲಿ ಅಂಗಡಿ ಹೊಂದಿದ್ದಾನೆ ಎಂದು ತಿಳಿದು ಬಂದಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪೊಲೀಸ್ ಆಯುಕ್ತ ಶಶಿಕುಮಾರ್ ಇಂತಹ ಕಿರುಕುಳಕ್ಕೊಳಗಾದರೆ ಮಹಿಳೆಯರು ಧೈರ್ಯದಿಂದ ದೂರು ನೀಡಿ ಎಂದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು