Sunday, November 24, 2024
ದಕ್ಷಿಣ ಕನ್ನಡಪುತ್ತೂರುಸುದ್ದಿ

ನರೇಂದ್ರ ಪ ಪೂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: “ವಿದ್ಯಾರ್ಥಿ ಸಾಧಕನಾಗಬೇಕಾದರೆ ಒಳ್ಳೆಯ ಹವ್ಯಾಸಗಳ ಜೊತೆಗೆ ಕ್ರಿಯಾಶೀಲರಾಗಿ ಅಭ್ಯಾಸದಕಡೆ ಗಮನ ಹರಿಸಿದರೆ ಮಾತ್ರ ಉತ್ತಮ ಭವಿಷ್ಯತ್ತಿಗೆ ನಾಂದಿಯಾಗುತ್ತದೆ.” ಎಂದು ನರೇಂದ್ರ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ತಿಳಿಸಿದರು.

ನರೇಂದ್ರ ಪ.ಪೂ. ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

“ವ್ಯಕ್ತಿ ಬದುಕನ್ನುರೂಪಿಸುವುದರಲ್ಲಿ ಶಿಕ್ಷಣಕ್ಕೆ ಪ್ರಮುಖ ಪಾತ್ರವಿದೆ. ವಿದ್ಯಾರ್ಥಿಜೀವನದಲ್ಲಿ ನಾವೇನು ಕಲಿಯುತ್ತೇವೆಯೋ ಅದು ನಮ್ಮ ಭವಿಷ್ಯವನ್ನುರೂಪಿಸುತ್ತದೆ. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಪರಿವರ್ತನೆ ತಂದು ಕಲಿಕೆಯಲ್ಲಿ ಆಸಕ್ತಿ ಮೂಡಿಸುತ್ತವೆ” ಎಂದು ಹೇಳಿದರು.
ಕಾಲೇಜಿನ ಉಪನ್ಯಾಸಕರಾದ ಶ್ರೀಮತಿ ಶಶಿಕಲಾ ಮತ್ತು ಶ್ರೀಮತಿ ಪ್ರಭಾವತಿ ಅವರು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ವೇದಿಕೆಯಲ್ಲಿ ಎಲ್ಲಾ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಸುಭಾಷಿತ ಸ್ವಾಗತಿಸಿ ವಂದಿಸಿದರು.ವಿಜ್ಞಾನ ವಿಭಾಗದ ಕ್ಷಮಾ ಕಾರ್ಯಕ್ರಮವನ್ನು ನಿರೂಪಿಸಿದರು.
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಮೋಜಿನ ಆಕರ್ಷಕ ಆಟಗಳನ್ನು ಆಡಿಸಿದರು. ಪ್ರಥಮ ಪಿಯುಸಿಯ ಎಲ್ಲಾ ವಿದ್ಯಾರ್ಥಿಗಳು ಬಹಳ ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದರು.