Sunday, November 24, 2024
ಕುಂದಾಪುರಸುದ್ದಿ

ಕುಂದಾಪುರ: ಸರಕಾರಿ ಬಸ್‍ಗಾಗಿ ಆಗ್ರಹಿಸಿ ಕುಂದಾಪುರ ಎಬಿವಿಪಿ ವತಿಯಿಂದ ಶನಿವಾರ ನಗರದ ಶಾಸ್ತ್ರಿ ವೃತ್ತದಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ – ಕಹಳೆ ನ್ಯೂಸ್

ಕುಂದಾಪುರ: ಕುಂದಾಪುರದಿಂದ ಕೆರಾಡಿ, ಮಾರಣಕಟ್ಟೆ, ಬೆಳ್ಳಾಲ, ಕೊಲ್ಲೂರು ಮಾರ್ಗಕ್ಕೆ ಸರಕಾರಿ ಬಸ್ ಅನ್ನು ಓಡಿಸುವಂತೆ ಆಗ್ರಹಿಸಿ ಎಬಿವಿಪಿ ಕುಂದಾಪುರ ವತಿಯಿಂದ ಶನಿವಾರ ನಗರದ ಶಾಸ್ತ್ರಿ ವೃತ್ತದಿಂದ ತಾಲೂಕು ಕಚೇರಿಯವರೆಗೆ ಮಳೆಯಲ್ಲಿಯೆ ನೆನೆದುಕೊಂಡು ಪ್ರತಿಭಟನಾ ಮೆರವಣಿಗೆ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಕುಂದಾಪುರ ತಹಶೀಲ್ದಾರ್ ಕಿರಣ್ ಗೌರಯ್ಯ ಅವರು ಎಬಿವಿಪಿ ವಿದ್ಯಾರ್ಥಿಗಳಿಂದ ಮನವಿಯನ್ನು ಸ್ವೀಕರಿಸಿದರು. ಕುಂದಾಪುರದಿಂದ ಕೆರಾಡಿ, ಮಾರಣಕಟ್ಟೆ ಮಾರ್ಗದಲ್ಲಿ500 ಮತ್ತು ಕುಂದಾಪುರ ಬೆಳ್ಳಾಲ ಮಾರ್ಗದಲ್ಲಿ 400 ವಿದ್ಯಾರ್ಥಿಗಳು ಸಾರಿಗೆ ವ್ಯವಸ್ಥೆಯಿಂದ ವಂಚಿತರಾಗಿದ್ದಾರೆ. ಈ ಮಾರ್ಗದಲ್ಲಿ ಕೆ.ಎಸ್.ಆರ್.ಟಿ.ಸಿ ಪರವಾನಗಿ ಇದ್ದರೂ ಸಹ ಯಾವುದೇ ಕೆ.ಎಸ್.ಅರ್.ಟಿ.ಸಿ ಬಸ್ ಗಳು ಇದುವರೆಗೂ ಸಂಚರಿಸಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಮಸ್ಯೆಯನ್ನು ಬಗೆಹರಿಸದಿದ್ದಲ್ಲಿ ತಾಲೂಕು ಮಟ್ಟದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ 5000ಕ್ಕೂ ಮಿಕ್ಕಿ ವಿದ್ಯಾರ್ಥಿಗಳಿಂದ ಡಿಪೆÇೀ ಮುಂದೆ ಧರಣಿ ಮಾಡಿ ಕೆ.ಎಸ್.ಆರ್.ಟಿ.ಸಿ ಎಲ್ಲಾ ಮಾರ್ಗದ ಬಸ್ ಗಳನ್ನು ತಡೆಹಿಯುತ್ತೇವೆ. ಇದರಿಂದಾಗಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಉಂಟಾಗುವ ಸಮಸ್ಯೆಗಳಿಗೆ ನೀವೇ ನೇರ ಹೊಣೆಯಾಗಿರುತ್ತಿರಿ. ಆದ್ದರಿಂದ ಈ ಅವಕಾಶಕ್ಕೆ ಎಡೆಮಾಡಿಕೊಡದೆ ಆದಷ್ಟು ಬೇಗ ಈ ಸಮಸ್ಯೆ ಗೆ ಒಂದು ಸೂಕ್ತ ಪರಿಹಾರ ಒದಗಿಸಬೇಕೆಂದು ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತಾಲೂಕು ಸಂಚಾಲಕ ಜಯಸೂರ್ಯ ಶೆಟ್ಟಿ, ಕುಂದಾಪುರ ತಾಲೂಕಿನ ಪ್ರಸಿದ್ಧ ಧಾರ್ಮಿಕ ಸ್ಥಳವಾದ ಕೊಲ್ಲೂರಿನಲ್ಲಿ ಇದ್ದು ಇದುವರೆಗೂ ಕೂಡ ಯಾವುದೇ ಸರಕಾರಿ ಬಸ್ಸಿನ ವ್ಯವಸ್ಥೆ ಇಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜಿಗೆ ತೆರಳಲು ದಿನಾಲು ಹಣ ನೀಡಿ ಹೋಗಬೇಕಾದ ಪರಿಸ್ಥಿತಿ ಇಂದಿಗೂ ಇದೆ. ಇದರಿಂದ ಬಡ ವಿದ್ಯಾರ್ಥಿಗಳಿಗೆ ತುಂಬಾ ಸಮಸ್ಯೆಯಾಗುತ್ತಿದೆ. ಇಲ್ಲಿ ದಿನಾಲು ಬಸ್ಸನ್ನು ಅವಲಂಬಿಸಿ ಸುಮಾರು 1000 ದಿಂದ 2000 ವಿದ್ಯಾರ್ಥಿಗಳು ದಿನನಿತ್ಯ ಶಾಲೆಗೆ ತೆರಳಲು ಕೊಲ್ಲೂರಿನಿಂದ ಹೊರಟು ಕುಂದಾಪುರದವರೆಗೂ ಸಹ ಅನೇಕ ವಿದ್ಯಾಸಂಸ್ಥೆಗಳಿಗೆ ವಿದ್ಯಾರ್ಥಿಗಳು ತೆರಳುತ್ತಿದ್ದಾರೆ, ಇಲ್ಲಿ ಯಾವುದೇ ಸರಕಾರಿ ಬಸ್ಸಿನ ವ್ಯವಸ್ಥೆ ಇಲ್ಲ ಎಂದರು.

ಜಗತ್ ಪ್ರಸಿದ್ಧ ಕೊಲ್ಲೂರಿಗೆ ಯಾವುದೇ ಸರಕಾರಿ ಬಸ್ಸಿನ ವ್ಯವಸ್ಥೆ ಅತ್ಯಂತ ದುಃಖದ ವಿಷಯ ಹಾಗೂ ಸರಕಾರವು ಈ ಪ್ರಸಿದ್ಧ ಸ್ಥಳಕ್ಕೆ ಇಂದಿಗೂ ಯಾವುದೇ ಸರಕಾರಿ ಬಸ್ಸಿನ ವ್ಯವಸ್ಥೆ ಮಾಡದೇ ಇರುವುದು ಒಂದು ಅತ್ಯಂತ ಗಂಭೀರವಾದ ಹಾಗೂ ಮುಜುಗರದ ವಿಷಯವಾಗಿದೆ. ಕೆರಾಡಿ ಮಾರ್ಗದಲ್ಲಿ ಕೆರಾಡಿ-ಬೆಳ್ಳಾಲ-ಕುಂದಾಪುರ ಮಾರ್ಗದಲ್ಲಿ 400 ವಿದ್ಯಾರ್ಥಿಗಳು, ಮಾರಣಕಟ್ಟೆ -ಕುಂದಾಪುರ ಮಾರ್ಗದಲ್ಲಿ 500 ಮತ್ತು ವಿದ್ಯಾರ್ಥಿಗಳು ಸಾರಿಗೆ ವ್ಯವಸ್ಥೆಯಿಂದ ವಂಚಿತರಾಗಿದ್ದಾರೆ. ಈಗಾಗಲೇ ಈ ಮಾರ್ಗದಲ್ಲಿ ಪರವಾನಗಿ ಇದ್ದರೂ ಸಹ ಯಾವುದೇ ಕೆ.ಎಸ್.ಅರ್.ಟಿ.ಸಿ ಬಸ್ ಗಳು ಇದುವರೆಗೂ ಸಂಚರಿಸುತ್ತಿಲ್ಲ. ಈ ಸಮಸ್ಯೆಗೆ ಸಂಬಂಧಪಟ್ಟಂತೆ ಅಧಿಕಾರಿಗಳು, ಶಾಸಕರು, ಮಂತ್ರಿಗಳು ಹಾಗೂ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದು ಯಾವುದೇ ಪ್ರಯೋಜನವಾಗಿಲ್ಲ. ಇದಕ್ಕೆ ಸಂಬಂಧಪಟ್ಟಂತೆ ಶಾಸಕರು ಕೂಡ ಜಿಲ್ಲಾಧಿಕಾರಿಯವರಿಗೆ ಮಾಹಿತಿ ನೀಡಿದ್ದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ ಎಂದರು.

ಒಂದು ವಾರದಲ್ಲಿ ಸಮಸ್ಯೆಯನ್ನು ಬಗೆಹರಿಸದ್ದಿದ್ದಲ್ಲಿ ತಾಲೂಕು ಮಟ್ಟದಲ್ಲಿ ಅಖೀಲ ಭಾರತ ವಿದ್ಯಾರ್ಥಿ ಪರಿಷತ್‍ನಿಂದ 5000ಕ್ಕೂ ಮಿಕ್ಕಿ ವಿದ್ಯಾರ್ಥಿಗಳಿಂದ ಡಿಪೆÇೀ ಮುಂದೆ ಧರಣಿ ಮಾಡಿ ಕೆ.ಎಸ್.ಅರ್.ಟಿ.ಸಿ ಎಲ್ಲಾ ಮಾರ್ಗದ ಬಸ್‍ಗಳನ್ನು ತಡೆಹಿಡಿಯುತ್ತೇವೆ ಎಂದು ಪ್ರತಿಭಟನಾ ನಿರತರ ಎಚ್ಚರಿಸಿದ್ದಾರೆ.
ಈ ಸಂದರ್ಭದಲ್ಲಿ ತಾಲೂಕು ವಿದ್ಯಾರ್ಥಿ ಪ್ರಮುಖರಾದ ಧ್ವನಿ, ಭಂಡಾರ್ಕಾಸ್ ಕಾಲೇಜಿನ ನಾಗೇಶ್, ಶ್ರೀನಿಧಿ, ಬಿ.ಬಿ ಹೆಗ್ಡೆ ಕಾಲೇಜಿನ ಅನುμÁ, ಧನುμï, ಬಸ್ರೂರು ಶಾರದಾ ಕಾಲೇಜಿನ ರಂಜಿತ್,ದೀಪಾ, ಕೋಟೇಶ್ವರ ಸರ್ಕಾರಿ ಪದವಿ ಕಾಲೇಜಿನ ಅಭಿμÉೀಕ್, ಆರ್.ಎನ್ ಶೆಟ್ಟಿ ಕಾಲೇಜಿನ ನಿತಿನ್ ಮೊದಲಾದವರು ಉಪಸ್ಥಿತರಿದ್ದರು.