ಸತತ 2ನೇ ದಿನ ಪಾಸಿಟಿವಿಟಿ ದರ ಏರಿಕೆ – ರಾಜ್ಯದಲ್ಲಿಂದು 463 ಮಂದಿಗೆ ಕೊರೊನಾ ; ಬೆಂಗಳೂರು ನಗರದಲ್ಲಿ 429, ದಕ್ಷಿಣ ಕನ್ನಡದಲ್ಲಿ 14 ಸೋಂಕು – ಕಹಳೆ ನ್ಯೂಸ್
ಬೆಂಗಳೂರು: ರಾಜ್ಯದಲ್ಲಿ ಸತತ 2ನೇ ದಿನ ಪಾಸಿಟಿವಿಟಿ ದರ ಏರಿಕೆಯಾಗಿದೆ. ನಿನ್ನೆ ಶೇ.2.07 ರಷ್ಟಿದ್ದ ಪಾಸಿಟಿವಿಟಿ ದರ ಇಂದು ಶೇ.2.15ಕ್ಕೆ ಏರಿಕೆಯಾಗಿದೆ. 463 ಹೊಸ ಸೋಂಕಿನ ಪ್ರಕರಣಗಳು ಕಂಡುಬಂದಿದ್ದು, ಬೆಂಗಳೂರು ನಗರದಲ್ಲೇ 429 ಪ್ರಕರಣಗಳು ವರದಿಯಾಗಿದೆ.
ಇಂದು ಬೆಂಗಳೂರು ನಗರದಲ್ಲಿ 429 ಪ್ರಕರಣ ದಾಖಲಾಗಿದ್ದು, ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 3,651ಕ್ಕೆ ಏರಿಕೆ ಕಂಡಿದೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 2.15ಕ್ಕೆ ಏರಿಕೆ ಕಂಡಿದೆ. ಆದರೆ ಇಂದು ಸಹ ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ.
ಇಂದು 199 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,066 ಮರಣ ಪ್ರಕರಣ ಪತ್ತೆಯಾಗಿದೆ.
ಈವರೆಗೆ ರಾಜ್ಯದಲ್ಲಿ ಒಟ್ಟು 39,56,334 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,12,575 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 9,028 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 21,519 ಸ್ಯಾಂಪಲ್ (ಆರ್‌ಟಿಪಿಸಿಆರ್ 16,406 + 5,113 ರ‍್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ
ಬೆಂಗಳೂರು ನಗರದಲ್ಲಿ 429 ಪ್ರಕರಣ ಹೊರತುಪಡಿಸಿ, ದಕ್ಷಿಣ ಕನ್ನಡದಲ್ಲಿ 14, ದಾವಣಗೆರೆಯಲ್ಲಿ 2, ಧಾರವಾಡದಲ್ಲಿ 4, ಉಡುಪಿಯಲ್ಲಿ 3, ಉತ್ತರ ಕನ್ನಡದಲ್ಲಿ 6 ಹಾಗೂ ಬಳ್ಳಾರಿ, ಚಿತ್ರದುರ್ಗ, ಗದಗ, ಹಾಸನ, ರಾಯಚೂರು ಜಿಲ್ಲೆಗಳಲ್ಲಿ ತಲಾ ಒಂದೊಂದು ಪ್ರಕರಣಗಳು ಕಂಡುಬಂದಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.