Thursday, January 23, 2025
ದಕ್ಷಿಣ ಕನ್ನಡಬೆಂಗಳೂರುಸುದ್ದಿ

ಮಂಗಳೂರು: ಮನೆಗೆ ಫೋನ್​ ಕರೆ ಮಾಡಲು ಬಿಟ್ಟಿಲ್ಲ ಅಂತ ಹಾಸ್ಟೆಲ್‍ನಲ್ಲೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ – ಕಹಳೆ ನ್ಯೂಸ್

ಮಂಗಳೂರು: ಇಲ್ಲೊಬ್ಬ 14 ವರ್ಷದ ವಿದ್ಯಾರ್ಥಿ ಹಾಸ್ಟೆಲ್‍ನವರು ಮನೆಗೆ ಫೋನ್​ ಕರೆ ಮಾಡಲು ಬಿಡಲಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ತಲಪಾಡಿಯ ಕೆ.ಸಿ.ರೋಡ್ ಬಳಿ ಇರುವ ಶಾರದಾ ವಿದ್ಯಾನಿಕೇತನ ಶಾಲೆಯ ಹಾಸ್ಟೆಲ್‍ನಲ್ಲಿ ನಡೆದಿದೆ.

ಇಲ್ಲಿನ 9ನೇ ತರಗತಿಯ ವಿದ್ಯಾರ್ಥಿ ಪೂರ್ವಜ್ (14) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಈತ ಬೆಂಗಳೂರಿನ ಹೊಸಕೋಟೆ ಮೂಲದ ವಿದ್ಯಾರ್ಥಿಯಾಗಿದ್ದು, ಪಾಲಕರು ಇಲ್ಲಿ ಹಾಸ್ಟೆಲ್‍ನಲ್ಲಿ ಇರಿಸಿ ವಿದ್ಯಾಭ್ಯಾಸ ಕೊಡಿಸುತ್ತಿದ್ದರು. ಆದರೆ ಹಾಸ್ಟೆಲ್‍ನವರು ಮನೆಗೆ  ಫೋನ್​  ಮಾಡಲು ಬಿಡಲಿಲ್ಲ ಎಂಬ ಕಾರಣಕ್ಕೆ ಈ ವಿದ್ಯಾರ್ಥಿ ನೇಣು ಬಿಗಿದುಕೊಂಡಿದ್ದಾನೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು