Sunday, January 19, 2025
ರಾಷ್ಟ್ರೀಯಸುದ್ದಿ

ರಾಷ್ಟ್ರಪತಿ ಚುನಾವಣೆ ; ಎನ್‌ಡಿಎ ಅಭ್ಯರ್ಥಿಯಾಗಿ ಆದಿವಾಸಿ ಮಹಿಳೆ, ಶಿಕ್ಷಕಿಯಾಗಿ ಸೇವೆ ಸಲ್ಲಿಸಿರುವ ದ್ರೌಪದಿ ಮುರ್ಮು – ಕಹಳೆ ನ್ಯೂಸ್

ನವದೆಹಲಿ, ಜೂ 21 : ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿಯಾಗಿ ಆದಿವಾಸಿ ಮಹಿಳೆ, ಶಿಕ್ಷಕಿಯಾಗಿ ಸೇವೆ ಸಲ್ಲಿಸಿರುವ ದ್ರೌಪದಿ ಮುರ್ಮು ಅವರು ಕಣಕ್ಕಿಳಿಯಲಿದ್ದಾರೆ.


ಈ ಕುರಿತು ಘೋಷಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಬುಡಕಟ್ಟು ಮಹಿಳಾ ಅಭ್ಯರ್ಥಿಯೋರ್ವರಿಗೆ ಇದೇ ಮೊದಲ ಬಾರಿಗೆ ರಾಷ್ಟ್ರಪತಿ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲುವ ಅವಕಾಶ ಕಲ್ಪಿಸಲಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಮುರ್ಮು ಅವರು ಶಾಸಕರಾಗಿ, ಸಚಿವರಾಗಿ ಸುದೀರ್ಘ ಸೇವೆ ಸಲ್ಲಿಸಿದ್ದಾರೆ. ಒಡಿಶಾ ಸರ್ಕಾರದ ಸಾರಿಗೆ ಮತ್ತು ವಾಣಿಜ್ಯ ಖಾತೆಯನ್ನು ನಿಭಾಯಿಸಿದ ಅನುಭವಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಿಪಕ್ಷಗಳ ಮೈತ್ರಿಕೂಟ ಯಶವಂತ್ ಸಿನ್ಹಾ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದ ಬೆನ್ನಲ್ಲೇ, ದ್ರೌಪದಿ ಮುರ್ಮು ಅವರನ್ನು ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಘೋಷಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು