Tuesday, January 21, 2025
ದಕ್ಷಿಣ ಕನ್ನಡಸುದ್ದಿ

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ (ರಿ.) ಗ್ರಾಮ ಪಂಚಾಯತ್ ಬಂದಾರು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಂದಾರು ಹಾಗೂ ಕೆ.ವಿ.ಜಿ. ದಂತ ಮಹಾ ವಿದ್ಯಾಲಯ ಸುಳ್ಯ ಇದರ ಸಹಯೋಗದಲ್ಲಿ ಸಾರ್ವಜನಿಕ ಉಚಿತ ದಂತ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ – ಕಹಳೆ ನ್ಯೂಸ್

ಬಂದಾರು: ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ (ರಿ.) ಗ್ರಾಮ ಪಂಚಾಯತ್ ಬಂದಾರು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಂದಾರು ಹಾಗೂ ಕೆ.ವಿ.ಜಿ. ದಂತ ಮಹಾ ವಿದ್ಯಾಲಯ ಸುಳ್ಯ ಇದರ ಸಹಯೋಗದಲ್ಲಿ ಜೂ.26ರಂದು ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಭಾಭವನದಲ್ಲಿ ಬೆಳಿಗ್ಗೆ9.30ರಿಂದ 1.00ರವರೆಗೆ ಸಾರ್ವಜನಿಕ ಉಚಿತ ದಂತ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀಮತಿ ಮಮತಾ ಕೆಳೆಂಜಿಮಾರು ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪರಮೇಶ್ವರಿ ಕೆ. ಗೌಡ ಉದ್ಘಾಟಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಸುಳ್ಯ ಕೆ.ವಿ.ಜಿ. ದಂತ ಮಹಾವಿದ್ಯಾಲಯದ ಡಾ| ಅಲ್ವಿನ (M.D.S.) ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದ.ಕ. ಹಾಲು ಒಕ್ಕೂಟದ ಉಪ ವ್ಯವಸ್ಥಾಪಕರಾದ ಡಾ| ಸತೀಶ್ ರಾವ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶ್ರೀ ಯಶವಂತ, ಬಂದಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಗಂಗಾಧರ ಪೂಜಾರಿ, ಬಂದಾರು ಗ್ರಾಮ ಪಂಚಾಯತ್‍ನ ಅಭಿವೃದ್ಧಿ ಅಧಿಕಾರಿಯಾಗಿರುವ ಶ್ರೀ ಮೋಹನ ಬಂಗೇರ ಉಪಸ್ಥಿತಲಿರಲಿದ್ದಾರೆ.

ಆಸಕ್ತ ವಿದ್ಯಾರ್ಥಿಗಳು, ಪೆÇೀಷಕರು, ಸದಸ್ಯರು ಮತ್ತು ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕಾಗಿ ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರು, ಕಾರ್ಯನಿರ್ವಹಣಾಧಿಕಾರಿ, ನಿರ್ದೇಶಕರು ಮತ್ತು ಸಿಬ್ಬಂದಿ ವರ್ಗದವರು ಆಮಂತ್ರಿಸಿದ್ದಾರೆ.
ಇದರಲ್ಲಿ ದಂತ ಸ್ವಚ್ಛತೆ, ದಂತ ಕುಳಿ ತುಂಬುವಿಕೆ, ಹಲ್ಲು ಕೀಳುವಿಕೆ, ಇತ್ಯಾದಿ ಚಿಕಿತ್ಸೆಗಳು ಲಭ್ಯವಿರುತ್ತವೆ.