Monday, January 20, 2025
ಅಂತಾರಾಷ್ಟ್ರೀಯಸುದ್ದಿ

ಲ್ಯಾಂಡಿಂಗ್ ಗೇರ್ ಕುಸಿದು ಹೊತ್ತಿ ಉರಿದ ವಿಮಾನ ; 126 ಜನ ಪ್ರಾಣಾಪಾಯದಿಂದ ಪಾರು – ಕಹಳೆ ನ್ಯೂಸ್

ವಾಷಿಂಗ್ಟನ್: 126 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನದ ಲ್ಯಾಂಡಿಂಗ್ ಗೇರ್ ಕುಸಿದು, ಬೆಂಕಿ ಹೊತ್ತಿಕೊಂಡ ಘಟನೆ ಅಮೆರಿಕದ ಮಿಯಾಮಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಸದ್ಯ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.

ಡೊಮಿನಿಕನ್ ರಿಪಬ್ಲಿಕ್‌ನ ಸ್ಯಾಂಟೋ ಡೊಮಿಂಗೊದಿಂದ ಅಮೆರಿಕದ ಮಿಯಾಮಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದ ರೆಡ್ ಏರ್ ವಿಮಾನದಲ್ಲಿ ಲ್ಯಾಂಡಿಂಗ್ ಗೇರ್ ಕುಸಿದು, ಭಾರೀ ಬೆಂಕಿ ಹುಟ್ಟಿಕೊಂಡಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ವಿಮಾದಲ್ಲಿದ್ದ 126 ಜನರ ಪೈಕಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇತರ ಪ್ರಯಾಣಿಕರನ್ನು ವಿಮಾನದಿಂದ ಬಸ್ ಮೂಲಕ ಟರ್ಮಿನಲ್‌ಗೆ ಕರೆದೊಯ್ಯಲಾಗಿದೆ ಎಂದು ವರದಿಗಳು ತಿಳಿಸಿವೆ.

ವಿಮಾನಕ್ಕೆ ಹತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಲಾಗಿದೆ ಹಾಗೂ ಇಂಧನ ಸೋರಿಕೆಯನ್ನು ನಿಯಂತ್ರಿಸಲಾಗುತ್ತಿದೆ ಎಂದು ಮಿಯಾಮಿ ಡೇಡ್ ಫೈರ್ ರೆಸ್ಕ್ಯೂ ಟ್ವೀಟ್‌ನಲ್ಲಿ ತಿಳಿಸಿದೆ.