Saturday, September 21, 2024
ರಾಜಕೀಯರಾಷ್ಟ್ರೀಯಸುದ್ದಿ

ಮಹಾರಾಷ್ಟ್ರ ವಿಧಾನಸಭೆ ವಿಸರ್ಜನೆ ; ಸುಳಿವು ಕೊಟ್ಟ ಸಂಜಯ್ ರಾವತ್ – ಕಹಳೆ ನ್ಯೂಸ್

ಮುಂಬೈ: ಮಹಾರಾಷ್ಟ್ರ ಸರ್ಕಾರದ ರಾಜಕೀಯ ಅಸ್ಥಿರತೆ ಕುರಿತಂತೆ ಹಲವು ಬೆಳವಣಿಗೆಗಳು ನಡೆಯುತ್ತಿದ್ದು, ಶಿವಸೇನೆ ನಾಯಕ ಹಾಗೂ ಸಂಸದ ಸಂಜಯ್ ರಾವತ್ ಟ್ವೀಟ್ ಮಾಡುವ ಮೂಲಕ ಹೊಸ ತಿರುವನ್ನು ಕೊಟ್ಟಿದ್ದಾರೆ.

ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ(ಎಂವಿಎ) ಮೈತ್ರಿ ಸರ್ಕಾರಕ್ಕೆ ಸಂಕಟ ಬಂದಿದೆ. ಈ ಹಿನ್ನೆಲೆ ನಿನ್ನೆಯಿಂದ ಈ ಕುರಿತು ಭಾರೀ ಚರ್ಚೆಯಾಗುತ್ತಿದೆ. ಈ ಬೆನ್ನಲ್ಲೇ ಸಂಜಯ್ ರಾವತ್ ಟ್ವೀಟ್ ಮಾಡಿದ್ದು, ವಿಧಾನಸಭೆಯ ವಿಸರ್ಜನೆಯತ್ತ ಮಹಾರಾಷ್ಟ್ರ ರಾಜಕೀಯ ಬೆಳವಣೆಗೆಗಳ ಪಯಣ ಎಂದು ಒಂದೇ ಸಾಲಿನಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ಅವರು ಶಾಸಕಾಂಗ ಸಭೆಯನ್ನು ವಿಸರ್ಜನೆ ಸುಳಿವು ಕೊಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು

ಈ ಹಿಂದೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅವರು, ಏಕನಾಥ್ ಶಿಂಧೆ ಅವರೊಂದಿಗಿರುವ ಮಾತುಕತೆ ನಡೆಸಲಾಗುತ್ತಿದೆ. ಎಲ್ಲರೂ ಶಿವಸೇನೆಯಲ್ಲಿಯೇ ಇರುತ್ತಾರೆ. ನಮ್ಮ ಪಕ್ಷ ಸತತ ಹೋರಾಟ ಮಾಡುತ್ತೆ. ಹೆಚ್ಚೆಂದರೆ ಅಧಿಕಾರ ಕಳೆದುಕೊಳ್ಳಬಹುದು ಆದರೆ ಹೋರಾಟ ಮುಂದುವರಿಸುತ್ತೇವೆ ಎಂದಿದ್ದರು.

ಈ ಮಧ್ಯೆ ರಾಜ್ಯಪಾಲ ಭಗತ್ ಸಿಂಗ್ ಮತ್ತು ಸಿಎಂ ಸಿಎಂ ಉದ್ಧವ್ ಠಾಕ್ರೆ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕ್ಷಣಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿರುವ ಮಹಾರಾಷ್ಟ್ರ ಸರ್ಕಾರ ಮುಂದುವರೆಯುತ್ತಾ? ಪತನಗೊಳ್ಳುತ್ತಾ ಎಂಬ ಪ್ರಶ್ನೆಗೆ ಕೆಲ ದಿನಗಳಲ್ಲಿ ಉತ್ತರ ಸಿಗಲಿದೆ.