Sunday, January 19, 2025
ದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ಬಂಟ್ವಾಳ – ಜ್ವರದಿಂದ ಬಳಲುತ್ತಿದ್ದ 6 ವರ್ಷದ ಬಾಲಕಿ ಮೃತ್ಯು..!– ಕಹಳೆ ನ್ಯೂಸ್

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಹನುಮಾನ್ ನಗರದ ನಿವಾಸಿ ರವಿ ಆಚಾರ್ಯ ಎಂಬವರ ಪುತ್ರಿ ಆರಾಧ್ಯ ಆಚಾರ್ಯ(6)ಮೃತ ಬಾಲಕಿ.

ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಒಂದನೇ ತರಗತಿಯಲ್ಲಿ ಕಲಿಯುತ್ತಿದ್ದ ಆರಾಧ್ಯ ಆಚಾರ್ಯ ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದಳು, ಈಕೆಗೆ ಸ್ಥಳೀಯ ವೈದ್ಯರಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಎರಡು ದಿನಗಳ ಹಿಂದೆ ಜ್ವರ ಏಕಾಏಕಿ ಉಲ್ಬಣಗೊಂಡಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಮೃತಪಟ್ಟಿದ್ದಾಳೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು