Sunday, January 19, 2025
ಹೆಚ್ಚಿನ ಸುದ್ದಿ

ಹಳ್ಳದಲ್ಲಿ ತೇಲಿಬಂದ 7 ಭ್ರೂಣಗಳ ಶವ ಕಂಡು ಬೆಚ್ಚಿಬಿದ್ದ ಬೆಳಗಾವಿ ಜನತೆ – ಕಹಳೆ ನ್ಯೂಸ್

ಬೆಳಗಾವಿ; ಡಬ್ಬಿಯಲ್ಲಿ ತುಂಬಿದ 7 ಭ್ರೂಣಗಳ ಶವ ಹಳ್ಳದಲ್ಲಿ ತೇಲಿಬಂದ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದಲ್ಲಿ ನಡೆದಿದ್ದು, ಭ್ರೂಣದ ಶವ ನೋಡಿ ಜನ ಬೆಚ್ಚಿಬಿದ್ದಿದ್ದಾರೆ.

ಈ ಕುರಿತು ಬೆಳಗಾವಿ ಡಿಎಚ್ ಒ ಮಾತನಾಡಿ ಎಲ್ಲವೂ “ಐದು ತಿಂಗಳ ಭ್ರೂಣವಾಗಿದೆ. ಈಗಾಗಲೇ ಗ್ರಾಮ ಪಂಚಾಯತಿಯಿಂದ ಸ್ಥಳೀಯ ಠಾಣೆಯಲ್ಲಿ ದೂರು ದಾಖಲಿಸುತ್ತಿದ್ದೇವೆ. ಕೇಸ್ ದಾಖಲಾದ ಬಳಿಕ ಶವಗಳನ್ನು ಬೆಳಗಾವಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ತಂದು ಪರೀಕ್ಷೆ ಮಾಡಲಾಗುವುದು. ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು” ಎಂದು ಅವರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು