Recent Posts

Monday, January 20, 2025
ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅರಣ್ಯ ಇಲಾಖೆ ಸಹಯೋಗದಲ್ಲಿ ನಡೆದ ಹಸಿರೇ ಉಸಿರು ಗಿಡ ನೆಡುವ ಕಾರ್ಯಕ್ರಮ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅರಣ್ಯ ಇಲಾಖೆ ಸಹಯೋಗದಲ್ಲಿ ನಡೆದ ಹಸಿರೇ ಉಸಿರು ಗಿಡ ನೆಡುವ ಕಾರ್ಯಕ್ರಮದಲ್ಲಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ. ಭರತ್ ಶೆಟ್ಟಿ ಅವರು ಪತ್ರಕರ್ತರಿಗೆ ಹಣ್ಣು ಹಂಪಲು ಬೀಜ ವಿತರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ ಕಾಮತ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಅರಣ್ಯ ಇಲಾಖೆ ಮಂಗಳೂರು ವಲಯದ ಉಪಅರಣ್ಯ ಸಂರಕ್ಷಣಾಧಿಕಾರಿ ಡಾ. ದಿನೇಶ್ ಕುಮಾರ್ ವೈ., ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯ ರಾವ್, ಮಂಗಳೂರು ಅರಣ್ಯ ಸಂಚಾರಿ ದಳದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್, ವಲಯ ಅರಣ್ಯ ಅಧಿಕಾರಿ ಪ್ರಶಾಂತ್ ಪೈ, ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ಅಧ್ಯಕ್ಷ ಸ್ವರ್ಣಸುಂದರ್, ಕುದುರೆಮುಖ ಕಬ್ಬಿಣ ಹಾಗೂ ಅದಿರು ಕಂಪನಿ ಮುಖ್ಯ ಪ್ರಬಂಧಕ ರಾಮಕೃಷ್ಣ, ಹಿರಿಯ ಪ್ರಬಂಧಕ ಮುರುಗೇಶ್, ಅರಣ್ಯ ಮಿತ್ರ ಮೋಹನ್ ಉಳ್ಳಾಲ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್, ರಾಜ್ಯ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ್ ಶೆಟ್ಟಿ ಬಾಳ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು