Recent Posts

Monday, January 20, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಜೆಪಿ ಬಂಟ್ವಾಳ ಮಂಡಲದ ಬಿ.ಸಿ.ರೋಡಿನ ಕಚೇರಿಯಲ್ಲಿ “ತುರ್ತು ಪರಿಸ್ಥಿತಿಯ ಕರಾಳ ನೆನಪುಗಳು” ಕಾರ್ಯಕ್ರಮ- ಕಹಳೆ ನ್ಯೂಸ್

ಬಂಟ್ವಾಳ: ಬಿಜೆಪಿ ಬಂಟ್ವಾಳ ಮಂಡಲದ ಬಿ.ಸಿ.ರೋಡಿನ ಕಚೇರಿಯಲ್ಲಿ “ತುರ್ತು ಪರಿಸ್ಥಿತಿಯ ಕರಾಳ ನೆನಪುಗಳು” ಕಾರ್ಯಕ್ರಮ ಮಂಡಲ ಉಪಾಧ್ಯಕ್ಷರಾದ ಚಿದಾನಂದ ರೈಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬಂಟ್ವಾಳ ಬೂಡಾದ ಅಧ್ಯಕ್ಷರಾದ ದೇವದಾಸ್ ಶೆಟ್ಟಿಯವರು ಕಾಂಗ್ರೆಸ್ ಪಕ್ಷ ಹೇರಿದ ತುರ್ತುಸ್ಥಿತಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆ ಯಾವ ರೀತಿ ಆಯಿತು ಎಂಬ ಬಗ್ಗೆ ಉಪನ್ಯಾಸ ನೀಡಿದರು.

ಮಂಡಲ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ ಶಕ್ತಿಕೇಂದ್ರ ಮತ್ತು ಬೂತ್ ಮಟ್ಟದಲ್ಲಿ ಮುಂದಿನ ದಿನಗಳಲ್ಲಿ ಆಗಬೇಕಾಗಿರುವ ಕಾರ್ಯಗಳ ಮಾಹಿತಿ ನೀಡಿದರು.

ಕ್ಷೇತ್ರ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ ಸ್ವಾಗತಿಸಿ, ವಂದಿಸಿದರು. ಈ ಕಾರ್ಯಕ್ರಮದಲ್ಲಿ ಮಂಡಲದ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರಗಳ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದರು.