Tuesday, January 21, 2025
ಸುದ್ದಿ

ಸೆಲ್ಪಿ ವಿಡಿಯೋ ಮಾಡಿಟ್ಟು ಯುವತಿ ಊರಲ್ಲಿ ಆತ್ಮಹತ್ಯೆಗೆ ಶರಣಾದ ಯುವಕ – ಕಹಳೆ ನ್ಯೂಸ್

ಹಾಸನ; ಯುವಕನೊಬ್ಬ ಮನನೊಂದು ಸೆಲ್ಫಿ ವಿಡಿಯೋ ಮಾಡಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಸೊರಬದಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ಅರಸಿಕೆರೆಯ ನಿವಾಸಿ ದಿಲೀಪ್ ಮೃತ ಯುವಕ.

ಬೆಂಗಳೂರಿನಲ್ಲಿ ದಿಲೀಪ್ ಮತ್ತು ಕುಟುಂಬಸ್ಥರು ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಅದೇ ಗಾರ್ಮೆಂಟ್ಸ್ ನಲ್ಲಿ ಸೊರಬ ತಾಲ್ಲೂಕಿನ ಬೆಟ್ಟದಕೂರ್ಲಿ ಗ್ರಾಮದ ಯುವತಿಯ ಪರಿಚಯವಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ದಿಲೀಪ್ ಮತ್ತು ಯುವತಿ ಇಬ್ಬರು ಸಹ ಕೆಲ ವರ್ಷಗಳ ಕಾಲ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ನಂತರದ ದಿನಗಳಲ್ಲಿ ಮನೆಯ ಕಾರಣ ನೀಡಿ ಯುವತಿ ಪ್ರೀತಿ ಮಾಡೋದಕ್ಕೆ ನಿರಾಕರಿಸಿದ್ದಾಳೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇದರಿಂದ ಮನನೊಂದು ಯುವತಿ ವಾಸವಿರುವ ಸೊರಬ ತಾಲ್ಲೂಕಿನ ಬೆಟ್ಟದಕೂರ್ಲಿ ಗ್ರಾಮಕ್ಕೆ ತೆರಳಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಲ್ಲಿನ ಸ್ಥಳಿಯರು ಆಕಸ್ಮಿಕವಾಗಿ ದಿಲೀಪ್ ಬಿದ್ದಿರುವುದನ್ನು ನೋಡಿದ್ದಾರೆ. ಪಕ್ಕದಲ್ಲೇ ವಿಷದ ಬಾಟಲಿಯನ್ನು ನೋಡಿ ತಕ್ಷಣ ದಿಲೀಪ್‍ನನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದರೂ ಆತ ಬದುಕುಳಿಯಲಿಲ್ಲ. ಈ ಕುರಿತು ಸೊರಬ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.