Recent Posts

Sunday, January 19, 2025
ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ 3ನೇ ಮದ್ವೆಯ ಗಾಳಿಸುದ್ದಿ : ಮೈಸೂರಿನ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ ನಟಿ ಪವಿತ್ರಾ ಲೋಕೇಶ್..! – ಕಹಳೆ ನ್ಯೂಸ್

ಮೈಸೂರು: ನಟಿ ಪವಿತ್ರಾ ಲೋಕೇಶ್ ಮೂರನೆ ಮದುವೆಯಾಗಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಇನ್ನೂ ಯಾವುದೇ ನಿಖರ ಮಾಹಿತಿ ಇಲ್ಲ. ಈ ನಡುವೆಯೇ ಪವಿತ್ರಾ ಅವರು ಮೈಸೂರಿನ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.

ಇದಕ್ಕೆ ಕಾರಣ, ಅಪರಿಚಿತ ವ್ಯಕ್ತಿಯೊಬ್ಬ ಪವಿತ್ರಾ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಖಾತೆ ತೆರೆದು, ಆಶ್ಲೀಲ ಸಂದೇಶಗಳನ್ನು ಕಳಿಸುತ್ತಿದ್ದಾರಂತೆ. ತಮ್ಮ ಹೆಸರಿಗೆ ಕಳಂಕ ತಂದು ತೇಜೋವಧೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆ ವ್ಯಕ್ತಿಯ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಪವಿತ್ರಾ ಮೈಸೂರಿನ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಸೈಬರ್ ಠಾಣೆ ಪೊಲೀಸರು ನಕಲಿ ಖಾತೆ ಮೂಲಕ ಸುಳ್ಳು ಸುದ್ದಿ ಹರಡುತ್ತಿರುವ ವ್ಯಕ್ತಿಯ ಪತ್ತೆಗೆ ಬಲೆ ಬೀಸಿದ್ದಾರೆ.
ಕನ್ನಡ ಮತ್ತು ತೆಲುಗು ಚಿತ್ರರಂಗ ಸೇರಿದಂತೆ ಧಾರಾವಾಹಿಗಳ ಮೂಲಕ ಅತ್ಯಂತ ಜನಪ್ರಿಯರಾಗಿರುವ ನಟಿ ಪವಿತ್ರಾ, ಇಂದಿಗೂ ಅದೇ ಒಳ್ಳೆಯ ಹೆಸರನ್ನು ಉಳಿಸಿಕೊಂಡವರು. ಇತ್ತೀಚೆಗೆ ಅವರು ತಮ್ಮ ಎರಡನೆಯ ಪತಿಯಿಂದ ದೂರವಾಗಿ ಮೂರನೆಯ ವಿವಾಹವಾಗಿದ್ದಾರೆ ಎಂಬ ಗಾಳಿಸುದ್ದಿ ಹರಡಿತ್ತು. ಇದರ ನಡುವೆಯೇ ಅಪರಿಚಿತ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ರಚಿಸಿ, ಇಲ್ಲಸಲ್ಲದ ಪೋಸ್ಟ್​ಗಳನ್ನು ಮಾಡುವುದೂ ಅಲ್ಲದೇ, ಸಂದೇಶ ಕಳುಹಿಸುತ್ತಿರುವುದು ಬೆಳಕಿಗೆ ಬಂದಿದೆ. ವ್ಯಕ್ತಿಯ ವಿರುದ್ಧ ಎಫ್‍ಐಆರ್ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು