ಕರಾವಳಿಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ಇಂದು ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ದಟ್ಟ ಮೋಡ ಕವಿದ ವಾತಾವರಣ ಇದ್ದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಸೂಚಿಸಲಾಗಿದೆ. ಇನ್ನು ನಿನ್ನೆ ರಾತ್ರಿಯಿಂದಲೇ ನಿರಂತರ ಧಾರಕಾರ ಮಳೆಯಾಗುತ್ತಿದ್ದು ನಗರ ಮತ್ತು ಸುತ್ತಮುತ್ತ ಹಲವು ರಸ್ತೆಗಳು ಜಲಾವೃತವಾಗಿ ಪಾದಾಚಾರಿಗಳು ಹಾಗೂ ವಾಹನ ಸವಾರರು ಪರದಾಡುವಂತಾಗಿದೆ.
ಇನ್ನು ಈಗಾಗಲೆ ಮಕ್ಕಳು ಶಾಲೆಗಳಿಗೆ ಬಂದಿದ್ದಲ್ಲಿ ಎಲ್ಲಾ ಮುಂಜಾಗೃತೆ ವಹಿಸಿ ಎಂದಿನAತೆ ಕಾರ್ಯ ನಿರ್ವಹಿಸಲು ಹಾಗೂ ಮಕ್ಕಳು ಶಾಲೆಗೆ ಬರಲು ಅನಾನುಕುಲವಾದ ಪ್ರದೇಶದಲ್ಲಿ ಆ ಮಕ್ಕಳಿಗೆ ಒಂದು ದಿನ ರಜೆ ಸಾರುವಂತೆ ಹಾಗೂ ಶಿಕ್ಷಣ ಇಲಾಖಾಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ಕಟ್ಟೆಚ್ಚರ ವಹಿಸುವಂರೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ವಿದ್ಯಾರ್ಥಿಗಳು ಈಗಾಗಲೇ ಶಾಲೆಗೆ ಬಂದರೆ ಅವರನ್ನು ವಾಪಸ್ ಕಳುಹಿಸುವ ಮತ್ತು ತರಗತಿಗಳನ್ನು ಮುಚ್ಚುವ ಅಗತ್ಯವಿಲ್ಲ ಎಂದು ಡಿಸಿ ಸ್ಪಷ್ಟವಾಗಿ ಸೂಚಿಸಿದ್ದಾರೆ.
ತಾಲ್ಲೂಕುಗಳಲ್ಲಿ, ತಹಶೀಲ್ದಾರ್, ಶಿಕ್ಷಣ ಅಧಿಕಾರಿಗಳಿಗೆ ಗಳಿಗೆ ಪರಿಸ್ಥಿತಿಯನ್ನು ಅವಲೋಕಿ ಮಾಹಿತಿ ನೀಡುವಂತೆ ಸೂಚಿಸಿದ್ದೇನೆ ಎಂದು ಡಿಸಿ ತಿಳಿಸಿದ್ದಾರೆ.
ಇನ್ನು ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ತೀವ್ರವಾದ ಮಳೆ ಹಿನ್ನಲೆ ರಜೆ ಘೋಷಿಸಲಾಗಿದೆ. ಧಾರಕಾರ ಮಳೆ ಸುರಿಯುತ್ತಿದ್ದು, ಮಳೆ ಹೆಚ್ಚಾಗುವ ಸೂಚನೆ ಇರುವುದರಿಂದ ಜನತೆ ಎಚ್ಚರಿಕೆಯಿಂದ ಇರಬೇಕಾಗಿದೆ.