Saturday, November 23, 2024
ದಕ್ಷಿಣ ಕನ್ನಡಸುದ್ದಿ

ದ.ಕ ಜಿಲ್ಲೆಯಲ್ಲಿ ಧಾರಾಕಾರ : ರಾಷ್ಟ್ರೀಯ ಹೆದ್ದಾರಿ ಮತ್ತು ಪ್ರಮುಖ ರಸ್ತೆಗಳಲ್ಲಿ ತುಂಬಿಕೊ0ಡ ನೀರು, ವಾಹನ ಸಂಚಾರರ ಪರದಾಟ –ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ನಗರ ಮತ್ತು ಹೊರವಲಯದಲ್ಲಿ ಇಂದು ಮುಂಜಾನೆಯಿ0ದಲೇ ಧಾರಾಕಾರ ಮಳೆ ಸುರಿಯುತ್ತಿದೆ. ರಾಷ್ಟ್ರೀಯ ಹೆದ್ದಾರಿ ಮತ್ತು ಪ್ರಮುಖ ರಸ್ತೆಗಳಲ್ಲೇ ನೀರು ನಿಂತಿದ್ದು, ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಭಾರೀ ಮಳೆಯ ಕಾರಣ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ್ದಾರೆ. ನಗರದ ಪಂಪ್‌ವೆಲ್, ತೊಕ್ಕೊಟ್ಟು, ಕೊಟ್ಟಾರ ಚೌಕಿ ಮತ್ತಿತರ ಕೆಲವು ಜಂಕ್ಷನ್‌ಗಳಲ್ಲಿ ನೀರು ಸರಾಗವಾಗಿ ಹರಿದು ಹೋಗಲಾಗದೆ ನಿಂತಿವೆ.

ಇನ್ನು ಪಂಪ್ವೆಲ್‌ನಲ್ಲಿ ಪೈಪ್ ಒಡೆದು ಹೋಗಿರುವ ಕಾರಣ ಕಾಮಗಾರಿಯನ್ನು ನಡೆಸಲಾಗುತ್ತಿದ್ದು, ವಾಹನಗಳಿಗೆ ಸರಾಗವಾಗಿ ಹೋಗಲಾಗದೇ ಸಂಚಾರ ಆಮೆಗತಿಯಲ್ಲಿ ಸಾಗುತ್ತಿದೆ.

ರಾ.ಹೆ. 75ರ ಅಡ್ಯಾರ್ ಸಮೀಪದ ಕಣ್ಣೂರು ಮತ್ತು ತೊಕ್ಕೊಟ್ಟು-ಮೆಲ್ಕಾರ್ ರಸ್ತೆಯನ್ನು ಸಂಪರ್ಕಿಸುವ ಹಲವು ಕಡೆಗಳಲ್ಲೂ ಕೂಡ ನೀರು ನಿಂತಿದೆ.
ಸ್ಮಾರ್ಟ್ ಸಿಟಿ ಯೋಜನೆಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ನಗರದ ಹಲವು ಕಡೆಗಳಲ್ಲೂ ನೀರು ತುಂಬಿಕೊAಡಿದ್ದು, ಪಾದಚಾರಿಗಳಿಗೆ, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಮಂಗಳೂರಿನ ನೀರುಮಾರ್ಗ ಸಮೀಪದ ಬದನಡಿ ಕ್ಷೇತ್ರ ಆವರಣಕ್ಕೆ ಭಾರೀ ನೀರು ನುಗ್ಗಿದ್ದು, ಮಳೆ ನೀರಿನಿಂದ ಜಲಾವೃತ್ತಗೊಂಡಿದೆ