Recent Posts

Sunday, January 19, 2025
ಸುದ್ದಿ

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ : ರಾಜ್ಯದಲ್ಲಿ 2 ಸಾವಿರ ಅಗ್ನಿಶಾಮಕ ಸಿಬ್ಬಂದಿ ನೇಮಕ, ಗೃಹ ಸಚಿವ ಆರಗ ಜ್ಞಾನೇಂದ್ರ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ 2,000 ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಬೆಂಗಳೂರು ಮೆಟ್ರೋ ರೈಲು ನಿಗಮ ವತಿಯಿಂದ ನಿರ್ಮಿಸಿರುವ ಜಯನಗರ ಅಗ್ನಿಶಾಮಕ ಠಾಣೆ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಜನತೆಯ ಪ್ರಾಣ ಹಾಗೂ ಆಸ್ತಿ ರಕ್ಷಣೆಗೆ, ರಾಜ್ಯ ಸರಕಾರ ಎಲ್ಲಾ ಸಾಧ್ಯವಾದ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದರು.ಅಗ್ನಿಶಾಮಕ ಇಲಾಖೆಗೆ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲು ರಾಜ್ಯ ಸರಕಾರ ವಿಶೇಷ ಆದ್ಯತೆ ನೀಡುತ್ತದೆ, ಹಾಗೂ ಹೆಚ್ಚಿನ ಅನುದಾನ ಒದಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು