Sunday, November 24, 2024
ಸುದ್ದಿಸುಳ್ಯ

ಸುಳ್ಯ: ಲೈಸೆನ್ಸ್ ಇಲ್ಲದೆ ಸುಳ್ಯದಲ್ಲಿ ಕಾರ್ಯಾಚರಿಸುತ್ತಿದ್ದ ಕ್ಲಿನಿಕ್‍ಗೆ ಬೀಗ ಜಡಿದ ಇಲಾಖೆ – ಕಹಳೆ ನ್ಯೂಸ್

ಸುಳ್ಯ: ಲೈಸೆನ್ಸ್ ಇಲ್ಲದೆ ಕಾರ್ಯಾಚರಿಸುತ್ತಿದ್ದ ಕ್ಲಿನಿಕ್‍ಗೆ ಆರೋಗ್ಯ ಇಲಾಖೆ ಬೀಗ ಜಡಿದು, ಕ್ಲಿನಿಕ್ ನಡೆಸುತ್ತಿದ್ದವರ ಮೇಲೆ ಕೇಸು ದಾಖಲಿಸಿದ ಘಟನೆ ಸುಳ್ಯದ ಕಲ್ಲುಗುಂಡಿಯಲ್ಲಿ ನಡೆದಿದೆ.

ಕ್ಲಿನಿಕ್‍ನ ವಸ್ತುಗಳನ್ನು ಕೂಡಾ ಮುಟ್ಟುಗೋಲು ಹಾಕಲಾಗಿದೆ. ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ ರೋಸ್ತಿ ಮ್ಯಾಥ್ಯೂ ಪರವಾನಿಗೆ ಇಲ್ಲದೆ ಮಾಂಬುಳಿ ಕ್ಲಿನಿಕ್ ಎಂಬ ಒಂದು ಕ್ಲಿನಿಕ್‍ನ್ನು ನಡೆಸುತ್ತಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕುರಿತು ಆರೋಗ್ಯ ಇಲಾಖೆಗೆ ಕೂಡಾ ದೂರು ಹೋಗಿತ್ತು. ಬಳಿಕ ಆರೋಗ್ಯ ಇಲಾಖೆ ಕಡೆಯಿಂದ ಕ್ಲಿನಿಕ್ ನಡೆಸುವವರ ಬಗ್ಗೆ ಕರ್ನಾಟಕ ಆಯುರ್ವೇದ, ಯುವಾನಿ ವೈದ್ಯ ಮಂಡಳಿಯಿಂದ ನೋಂದಣಿ ಪ್ರಮಾಣ ಪತ್ರ ಸಲ್ಲಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ 3 ಬಾರಿ ನೋಟಿಸ್ ನೀಡಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಆದರೆ ಅದಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಕೆಪಿಎಂಇ ನೋಂದಣಿ ಇಲ್ಲದೆ ಕ್ಲಿನಿಕ್ ನಡೆಸುವುದು ಕೆಪಿಎಂಇ ಕಾಯ್ದೆ 19 ಪ್ರಕಾರ ಅಕ್ರಮವಾಗುತ್ತದೆ.

ಈ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಕೆಪಿಎಂಇ ನೋಡಲ್ ಅಧಿಕಾರಿ ಡಾ. ದೀಪಾ ಪ್ರಭು ನೇತೃತ್ವದ ತಂಡ ಕ್ಲಿನಿಕ್‍ಗೆ ಬೀಗ ಜಡಿದಿದೆ.