Tuesday, January 21, 2025
ದಕ್ಷಿಣ ಕನ್ನಡಸುದ್ದಿ

ಮಂಗಳೂರು ನಗರ ಡಿಸಿಪಿಯಾಗಿ ಆಂಶು ಕುಮಾರ್ ನೇಮಕ-ಕಹಳೆ ನ್ಯೂಸ್

ಬೆಂಗಳೂರು: ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ಆಂಶು ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

2018ರ ಐಪಿಎಸ್‌ ಬ್ಯಾಚ್‌ನ ಅಧಿಕಾರಿಯಾದ ಇವರು ಕರಾವಳಿ ಭದ್ರತಾ ಪಡೆ, ಉಡುಪಿಯ ಎಸ್ಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ಹಿಂದಿನ ಮಂಗಳೂರು ನಗರ ಡಿಸಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಹರಿರಾಂ ಶಂಕರ್‌ ಅವರನ್ನು ಹಾಸನ ಎಸ್ಪಿಯಾಗಿ ನೇಮಕ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅವರಿಂದ ತೆರವಾದ ಸ್ಥಾನಕ್ಕೆ ಆಂಶು ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಇವರ ಜತೆಗೆ ನಾಗರಿಕ ಹಕ್ಕುಗಳ ಜಾರಿ ವಿಭಾಗದ ಎಡಿಜಿಪಿ ಅರುಣ್‌ ಚಕ್ರವರ್ತಿ ಅವರನ್ನು ಪೊಲೀಸ್‌ ಹೌಸಿಂಗ್‌ ಕಾರ್ಪೋರೇಷನ್‌ನ ಎಡಿಜಿಪಿಯಾಗಿ,

ಜಾಹೀರಾತು
ಜಾಹೀರಾತು
ಜಾಹೀರಾತು

ಪೊಲೀಸ್‌ ನೇಮಕಾತಿ ವಿಭಾಗದ ಡಿಐಜಿ ತ್ಯಾಗರಾಜನ್‌ ಅವರನ್ನು ಪೂರ್ವ ವಿಭಾಗದ ಡಿಐಜಿಪಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.