Sunday, January 19, 2025
ಉಡುಪಿಸುದ್ದಿ

ಬಸ್ ನಿಲ್ದಾಣದಲ್ಲಿ ಬಸ್‍ಗಾಗಿ ಕಾಯುತ್ತಿದ ವೇಳೆ ಹೃದಯಾಘಾತದಿಂದ ಮಹಿಳೆ ಸಾವು- ಕಹಳೆ ನ್ಯೂಸ್

ಉಡುಪಿ: ಬಸ್ ನಿಲ್ದಾಣದಲ್ಲಿ ಬಸ್‍ಗಾಗಿ ಕಾಯುತ್ತಿದ್ದ ಬ್ಯಾಂಕ್ ಉದ್ಯೋಗಿ ಮಹಿಳೆಯೊಬ್ಬರು ಹೃದಯಾಘಾತದಿಂದ ಕುಸಿದು ಸಾವನ್ಪಿದ ಘಟನೆ ಉಡುಪಿಯ ಉದ್ಯಾವರದ ಗುಡ್ಡೆಯಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಉದ್ಯಾವರದ ವಸಂತಿ ಸಾವನ್ಪಿದ ಮಹಿಳೆ. ಕಂಟ್ಟಿಂಗೇರಿಯಲ್ಲಿರುವ ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿರುವ, ವಸಂತಿ ಬೆಳಗ್ಗೆ ಕಚೇರಿಗೆ ತೆರಳಲು ಬಸ್ ನಿಲ್ದಾಣದಲ್ಲಿ ಬಸ್‍ಗಾಗಿ ಕಾಯುತ್ತಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ವೇಳೆ ಕುಸಿದು ಬಿದ್ದಿದ್ದು ಇದನ್ನು ಗಮನಿಸಿದ ರಿಕ್ಷಾ ಚಾಲಕರು ಮಹಿಳೆಯನ್ನು ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿದರು. ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು ಅದಾಗಲೇ ಮೃತಪಟ್ಟಿರುದಾಗಿ ದೃಡ ಪಡಿಸಿದರು. ಈ ಬಗ್ಗೆ ಕಾಪು ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು