Sunday, January 19, 2025
ದಕ್ಷಿಣ ಕನ್ನಡಸುದ್ದಿ

ಮಂಗಳೂರು: ದೋಣಿ ಮೇಲೆತ್ತುವಾಗ ನೇತ್ರಾವತಿ ನದಿಗೆ ಬಿದ್ದ ಓರ್ವ ನಾಪತ್ತೆ : ಮತ್ತಿಬ್ಬರ ರಕ್ಷಣೆ – ಕಹಳೆ ನ್ಯೂಸ್

ಬಂಟ್ವಾಳ: ದೋಣಿ ಮೇಲೆತ್ತುವಾಗ ಪ್ರವಾಹದ ರಭಸಕ್ಕೆ ದೋಣಿ ಸಮೇತ ನದಿಗೆ ಬಿದ್ದು ಓರ್ವ ನಾಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ಅರ್ಕುಳ ಗ್ರಾಮದ ಶಶಿರಾಜ್ ಧಕ್ಕೆಯಲ್ಲಿ ನಡೆದಿದೆ.

ನಾಪತ್ತೆಯಾದ ಯುವಕನನ್ನು ರಾಜು ಸಾಹ್ ಎಂದು ಗುರುತಿಸಲಾಗಿದೆ. ಘಟನೆ ವಿವರ ಆಸಿಫ್ ಮತ್ತು ಇಸಾಕ್ ಮಾಲಕತ್ವದ ದೋಣಿಯನ್ನು ಜು.2ರಂದು ಮಧ್ಯಾಹ್ನ 1 ಗಂಟೆಗೆ ಅರ್ಕುಳ ಗ್ರಾಮದ ಶಶಿರಾಜ್ ಧಕ್ಕೆಯಲ್ಲಿ ಸಾಂಪ್ರದಾಯಿಕ ಮರಳುಗಾರಿಕೆ ನಡೆಸುತ್ತಿದ್ದ ಸಮಯದಲ್ಲಿ ಉಪಯೋಗಿಸುತ್ತಿದ್ದ ದೋಣಿಯನ್ನು ನದಿಯಲ್ಲಿ ಭಾರಿ ಪ್ರವಾಹದ ಕಾರಣ ದಡಕ್ಕೆ ಮೇಲೆತ್ತುವಾಗ ಉತ್ತರ ಪ್ರದೇಶ ಮೂಲದವರಾದ ರಾಜು ಸಾಹ್, ಮೊಂತು ಸಾಹ್ ಮತ್ತು ನಾಗೇಂದ್ರ ಕುಮಾರ್ ಸಾಯನಿ ಎಂಬವರುಗಳು ದೋಣಿ ಸಮೇತ ನದಿಯ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೊಚ್ಚಿ ಹೋದವರಲ್ಲಿ ಮೊಂತು ಸಾಹ್ ಮತ್ತು ನಾಗೇಂದ್ರ ಕುಮಾರ್ ಅಡ್ಯಾರ್- ಪಾವೂರು ಬ್ರಿಡ್ಜಿನ ಅಡಿಯಲ್ಲಿ ಸಿಲುಕಿ ಈಜಿ ದಡ ಸೇರಿದ್ದಾರೆ. ರಾಜು ಸಾಹ್ ಎಂಬಾತ ನೀರಿನ ರಭಸಕ್ಕೆ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು