Recent Posts

Friday, November 22, 2024
ಕ್ರೈಮ್ರಾಜ್ಯಸುದ್ದಿ

40 ಸೆಕೆಂಡ್‌ನಲ್ಲಿ 60 ಬಾರಿ ಚುಚ್ಚಿ ಕೊಲೆ ; ಗುರೂಜಿ ಚಂದ್ರಶೇಖರ್‌ ಹಂತಕರನ್ನು ಬಂಧಿಸಿದ ಹುಬ್ಬಳ್ಳಿ ಪೊಲೀಸರು – ಕಹಳೆ ನ್ಯೂಸ್

ಹುಬ್ಬಳ್ಳಿ: ಸರಳ ವಾಸ್ತು (Sarala Vastu) ಖ್ಯಾತಿಯ  ಗುರೂಜಿ ಚಂದ್ರಶೇಖರ್‌ (Chandrasekhar Guruji), ಹುಬ್ಬಳ್ಳಿಯ ಉಣಕಲ್‌ ಕೆರೆ ಬಳಿಯ ಪ್ರೆಸಿಡೆಂಟ್‌ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದು, ಚಾಕು ಇರಿದು ಕೊಲೆ ಮಾಡಿ ಹಂತಕರು ಪರಾರಿಯಾಗಿದ್ದಾರೆ. ಈಗ ಕೃತ್ಯದ ಸಿಸಿಟಿವಿ ದೃಶ್ಯ ಲಭ್ಯವಾಗಿದ್ದು ಕೊಲೆಯ ಘೋರತೆ ಅನಾವರಣಗೊಂಡಿದೆ. ಇಬ್ಬರು ವ್ಯಕ್ತಿಗಳು ಹೋಟೆಲ್‌ ಲಾಬಿಯಲ್ಲಿ ಕುಳಿತಿದ್ದ ಚಂದ್ರಶೇಖರ್‌ ಗುರೂಜಿಯ ಆಶಿರ್ವಾದ ಪಡೆಯುವಂತೆ ಬರುತ್ತಾರೆ. ಇದ್ದಕ್ಕಿದ್ದಂತೆ ಇಬ್ಬರೂ ಚಾಕುವಿನಿಂದ ಬರ್ಬರವಾಗಿ ಹಲ್ಲೆ ಮಾಡಿ ಕೊನೆ ಉಸಿರಿರುವವರೆಗೂ ಚುಚ್ಚಿ ಸಾಯಿಸುತ್ತಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.  ವಾಸ್ತು ಮೂಲಕ ಜನಪ್ರಿಯರಾಗಿದ್ದ ಚಂದ್ರಶೇಖರ್‌ ಗುರೂಜಿ ಅವರನ್ನು ಹುಬ್ಬಳ್ಳಿಯಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

40 ಸೆಕೆಂಡ್‌ಳಲ್ಲಿ 60 ಬಾರಿ ಚುಚ್ಚಿ ಕೊಲೆ:

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್‌ಗೆ ಘಟನೆಯ ಸಿಸಿಟಿವಿ ದೃಶ್ಯ ಸಿಕ್ಕಿದ್ದು, ಚಂದ್ರಶೇಖರ್‌ ಗುರೂಜಿಗೆ 60ಕ್ಕೂ ಹೆಚ್ಚು ಬಾರಿ ಚುಚ್ಚಿ ಕೊಲೆ ಮಾಡಲಾಗಿದೆ. ಕೊಲೆ ಮಾಡಿರುವ ತೀವ್ರತೆಯನ್ನು ನೋಡಿದರೆ, ವೈಯಕ್ತಿಕ ವೈಷಮ್ಯದಿಂದಲೇ ಈ ಕೊಲೆ ಮಾಡಿರುವ ಸಾಧ್ಯತೆಯಿದೆ ಎನ್ನಲಾಗಿದೆ. ವೈಯಕ್ತಿಕ ದ್ವೇಷವಿದ್ದಾಗ ವ್ಯಕ್ತಿ ಒಳಗಿರುವ ಎಲ್ಲಾ ಸಿಟ್ಟನ್ನು ಈ ರೀತಿ ಹೊರ ಹಾಕಿರುವ ಸಾವಿರಾರುಪ ಪ್ರಕರಣಗಳು ನಮ್ಮ ಕಣ್ಣಮುಂದಿದೆ. ನಲವತ್ತು ಸೆಕೆಂಡ್‌ಗಳಲ್ಲಿ ಅರವತ್ತು ಬಾರಿ ಚುಚ್ಚಿ ಚಂದ್ರಶೇಖರ್‌ ಗುರೂಜಿಯನ್ನು ಕೊಲೆ ಮಾಡಲಾಗಿದೆ. ಇಬ್ಬರು ಹಂತಕರು ಈ ಕೆಲಸದಲ್ಲಿ ಭಾಗಿಯಾಗಿದ್ದಾರೆ. ಸುಮಾರು ಒಂದು ನಿಮಿಷಗಳ ಅಂತರದೊಳಗೆ ಚಂದ್ರಶೇಖರ್‌ ಗುರೂಜಿಯನ್ನು ಹಂತಕರು ಕೊಲೆ ಮಾಡಿ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಪ್ರಕರಣದ ಆರೋಪಿಗಳು ಹೋಟೆಲ್‌ನಿಂದ ಅಚೆ ಓಡಿ ಹೋಗುತ್ತಿರುವ ದೃಶ್ಯ ಕೂಡ ಸೆರೆಯಾಗಿದೆ. ಸಾಮಾನ್ಯವಾಗಿ ಬಾಡಿಗೆ ಹಂತಕರು ಈ ರೀತಿಯಾಗಿ ಹತ್ಯೆ ಮಾಡುವುದಿಲ್ಲ. ಬಾಡಿಗೆ ಹಂತಕರು ಕೊಲೆ ಮಾಡುವ ಸುಪಾರಿ ಪಡೆದ ನಂತರ ಸಾಯಿಸುವದಷ್ಟೇ ಮುಖ್ಯವಾಗಿರುತ್ತದೆ. ಈ ರೀತಿ ಕೋಪವನ್ನು ಹೊರ ಹಾಕುವವರಲ್ಲ. ಜತೆಗೆ ಸಾರ್ವಜನಿಕವಾಗಿಯೂ ಈ ರೀತಿಯ ಕೃತ್ಯಕ್ಕೆ ಕೈ ಹಾಕುವುದಿಲ್ಲ. ಈ ಎಲ್ಲವನ್ನೂ ಗಮನಿಸಿದರೆ ಯಾವುದೋ ಹಳೇ ದ್ವೇಷದಿಂದಲೇ ಈ ಕೃತ್ಯ ಮಾಡಿರುವ ಸಾಧ್ಯತೆಯಿದೆ ಎಂದು ಪೊಲೀಸರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆ ನಡೆದ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಕಮೀಷನರ್‌ ಲಾಬೂರಾಮ್‌ ಆಗಮಿಸಿದ್ದು, ಸ್ಥಳದ ಪರಿಶೀಲನೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕಾಗಿ ಇವರ ಹತ್ಯೆ ಮಾಡಲಾಗಿದೆ ಎನ್ನುವುದರ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಹೋಟೆಲ್‌ ನಲ್ಲಿ ರಿಸಪ್ಶನ್‌ನಲ್ಲಿಯೇ ಚಾಕು ಇರಿದು ಹಂತಕರು ಪರಾರಿಯಾಗಿದ್ದಾರೆ.

ಇಬ್ಬರು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. “ಜುಲೈ 2 ರಂದು ಹೋಟೆಲ್‌ಗೆ ಆಗಮಿಸಿದ್ದ ಚಂದ್ರಶೇಖರ್‌ ಗುರೂಜಿ ನಾಳೆ ಹೋಟೆಲ್‌ ರೂಮ್‌ ಖಾಲಿ ಮಾಡಬೇಕಿತ್ತು. ಇಂದು ಬೆಳಗ್ಗೆ ರಿಶಪ್ಶನ್‌ನಲ್ಲಿ ಕುಳಿತಿದ್ದ ವೇಳೆ ಬಂದ ದುಷ್ಕರ್ಮಿಗಳು ಕಾಲಿಗೆ ನಮಸ್ಕಾರ ಮಾಡುವಂತೆ ನಟಿಸಿ ಅವರಿಗೆ ಚಾಕು ಇರಿದಿದ್ದಾರೆ’ ಎಂದು ಹೋಟೆಲ್‌ ಸಿಬ್ಬಂದಿ ತಿಳಿಸಿದ್ದಾರೆ.

ಸರಳ ಜೀವನ, ಸರಳ ವಾಸ್ತು, ಸರಳ ಅಕಾಡೆಮಿ, ಮನೆಗಾಗಿ ವಾಸ್ತು, ವಾಸ್ತು ಪರಿಹಾರದ ಮೂಲಕ ಅವರು ಕರ್ನಾಟಕದ ಮನೆಮಾತಾಗಿದ್ದರು. ಈವರೆಗೂ 2 ಸಾವಿರಕ್ಕೂ ಅಧಿಕ ಸೆಮಿನಾರ್‌ಗಳಲ್ಲಿ ಮಾತನಾಡಿರುವ ಚಂದ್ರಶೇಖರ್‌, ಈವರೆಗೂ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ 16 ಪ್ರಶಸ್ತಿಗಳನ್ನು ಸಂಪಾದಿಸಿದ್ದಾರೆ. ಸಿವಿಲ್ ಇಂಜಿನಿಯರಿಂಗ್ ಜೊತೆಗೆ ಕಾಸ್ಮಿಕ್ ಆರ್ಕಿಟೆಕ್ಚರ್ ನಲ್ಲಿ ಡಾಕ್ಟರೇಟ್ ಪದವಿಯನ್ನೂ ಅವರು ಸಂಪಾದಿಸಿದ್ದರು.

ಸಿಜಿ ಪರಿವಾರ್‌ ಗ್ಲೋಬಲ್‌ ವಿಷನ್‌ನ ಚೇರ್ಮನ್‌ ಕೂಡ ಆಗಿದ್ದ ಚಂದ್ರಶೇಖರ್ ಗುರೂಜಿ 2016ರಲ್ಲಿ ಸರಳ ಜೀವನ ಎನ್ನುವ ಇನ್ಫೋ ಎಂಟರ್‌ಟೇನ್‌ಮೆಂಟ್‌ ಟಿವಿ ಚಾನೆಲ್‌ ಅನ್ನೂ ಆರಂಭ ಮಾಡಿದ್ದರು. ಚಂದ್ರಶೇಖರ ಗುರೂಜಿಯವರು 2002 ರಲ್ಲಿ ಸಿಜಿ ಪರಿವಾರ್‌ ಎನ್ನುವ ಎಂಬ ಖಾಸಗಿ ಲಿಮಿಟೆಡ್ ಕಂಪನಿಯನ್ನು ಆರಂಭಿಸಿದ್ದರು. ಆ  ಮೂಲಕ 350 ಕ್ಕೂ ಹೆಚ್ಚು ಶಿಷ್ಯರು ಮತ್ತು ಅನುಯಾಯಿಗಳೊಂದಿಗೆ ಸರಳ ವಾಸ್ತು ವಿಚಾರವನ್ನು ಹಂಚಿಕೊಳ್ಳಲು ಪ್ರಾರಂಭಿಸಿದರು.

ಜತೆಗಿದ್ದವರಿಂದಲೇ ಕೊಲೆ:

ಚಂದ್ರಶೇಖರ್‌ ಗುರೂಜಿ ಹತ್ಯೆಯನ್ನು ಮಾಡಿದವರು ಬೇರಾರೂ ಅಲ್ಲ ಅವರ ಜೊತೆಗೇ ಕೆಲಸ ಮಾಡಿಕೊಂಡಿದ್ದ ಮಹಾಂತೇಶ ಶಿರೂರು ಮತ್ತು ಮಂಜುನಾಥ್‌ ಮರೆವಾಡ. ಸಿಸಿಟಿವಿಯಲ್ಲಿ ಸೆರೆಯಾಗಿರುವ ವ್ಯಕ್ತಿ ಮಹಾಂತೇಶ ಶಿರೂರು. ಈತ ಈ ಹಿಂದೆ ಗುರೂಜಿ ಜೊತೆಗೇ ಕೆಲಸ ಮಾಡುತ್ತಿದ್ದ, ಆಕೆಯ ಪತ್ನಿಯೂ ಚಂದ್ರಶೇಖರ್‌ ಗುರೂಜಿ ಕಚೇರಿಯಲ್ಲೇ ಕೆಲಸ ಮಾಡುತ್ತಿದ್ದಳು ಎನ್ನಲಾಗಿದೆ. ಮಹಾಂತೇಶ ಶಿರೂರಿಗೆ ಮದುವೆ ಮಾಡಿಸಿದ್ದು ಕೂಡ ಚಂದ್ರಶೇಖರ್‌ ಗುರೂಜಿ ಎನ್ನಲಾಗಿದೆ. ಹತ್ಯೆಗಿರುವ ಕಾರಣಗಳನ್ನು ಪೊಲೀಸರು ತನಿಖೆ ನಡೆಸುತ್ತಿದ್ದು ರಿಯಲ್‌ ಎಸ್ಟೇಟ್‌ ವ್ಯವಹಾರ ಕಾರಣವಾಯಿತಾ ಎಂಬ ಬಗ್ಗೆ ವಿಚಾರಣೆ ಆರಂಭವಾಗಿದೆ.

ಮೂಲಗಳ ಮಾಹಿತಿ ಪ್ರಕಾರ ಮಹಾಂತೇಶ ಶಿರೂರು ಗುರೂಜಿ ಜತೆ ಬಹಳ ವರ್ಷದಿಂದ ಜತೆಗಿದ್ದ. ಗೋಕುಲ್ ರೋಡ್​​ನ ಗೂರೂಜಿ ಅಪಾರ್ಟ್​ಮೆಂಟ್​ನಲ್ಲೇ ಹಂತಕ ವಾಸ ಮಾಡುತ್ತಿದ್ದ. ಗೋಕುಲ್ ರಸ್ತೆ ಡೆಕ್ತಾನ್​ ಹಿಂಭಾಗದ ಅಪಾರ್ಟ್​ಮೆಂಟ್​ನಲ್ಲಿ ಗುರೂಜಿ ವಾಸವಿದ್ದರು. 2016ರವರೆಗೂ ಗುರೂಜಿ ಜತೆಗೇ ಇದ್ದ ಮಹಾಂತೇಶ್ ಶಿರೂರು. 2019ರವರೆಗೂ ಗುರೂಜಿ ಜತೆಗೆ ಹಂತಕನ ಪತ್ನಿ ಕೆಲಸಕ್ಕಿದ್ದಳು. ಇವರಿಬ್ಬರಿಗೂ ಮದುವೆ ಮಾಡಿಸಿದ್ದೇ ಚಂದ್ರಶೇಖರ್ ಗುರೂಜಿ ಎಂದೂ ಹೇಳಲಾಗುತ್ತಿದೆ.