Sunday, January 19, 2025
ಉದ್ಯೋಗರಾಜ್ಯಶಿಕ್ಷಣಸುದ್ದಿ

ಪಿಯು ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಆದೇಶ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಆದೇಶ ಹೊರಡಿಸಿದೆ.

2022-23ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಸರ್ಕಾರಿ ಪಿಯುಸಿ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವುದಕ್ಕೆ ಸರ್ಕಾರ ಸೂಚಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

VIDHAN SHOUDHA

ಜಾಹೀರಾತು
ಜಾಹೀರಾತು
ಜಾಹೀರಾತು

3708 ಅತಿಥಿ ಉಪನ್ಯಾಸಕರ ನೇಮಕಕ್ಕೆ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ. 2022-23ನೇ ಶೈಕ್ಷಣಿಕ ಸಾಲಿನಲ್ಲಿ ಬಡ್ತಿ, ವಯೋನಿವೃತ್ತಿ, ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಿರುವ ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕಕ್ಕೆ ಸೂಚನೆ ನೀಡಿದೆ.

ಖಾಲಿ ಇರುವ ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆ-3,271 ಮತ್ತು ಬಡ್ತಿ, ವಯೋನಿವೃತ್ತಿ, ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಬಹುದಾದ ಉಪನ್ಯಾಸಕರ ಹುದ್ದೆಗಳ ಸಂಖ್ಯೆ-100. ಹೊಸ ಸಂಯೋಜನೆಗಳಿಗೆ ಹುದ್ದೆ ಮಂಜೂರಾಗದ ವಿಷಯಗಳಿಗೆ ನೇಮಕ ಮಾಡಿಕೊಳ್ಳಬೇಕಾದ ಅತಿಥಿ ಉಪನ್ಯಾಸಕರ ಸಂಖ್ಯೆ 337 ಇದೆ