Sunday, January 19, 2025
ರಾಜ್ಯಶಿಕ್ಷಣಸುದ್ದಿ

ಪಿಯುಸಿ ಅತಿಥಿ ಉಪನ್ಯಾಸಕರಿಗೆ ಸರ್ಕಾರದಿಂದ ಭರ್ಜರಿ ಗಿಫ್ಟ್‌ ; ಗೌರವಧನ ಹೆಚ್ಚಳ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಪಿಯುಸಿ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್‌ ನೀಡಿದೆ. ಅತಿಥಿ ಉಪನ್ಯಾಸಕರ ಗೌರವ ಧನ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ.

ಈಗ ಪಿಯುಸಿ ಅತಿಥಿ ಉಪನ್ಯಾಸಕರ ಗೌರವಧನ 3 ಸಾವಿರ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈಗಾಗಲೇ ನೇಮಕಗೊಂಡು ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ನೀಡಲಾಗುತ್ತಿದ್ದ ಮಾಸಿಕ ಗೌರವಧನ 9,000 ರೂ.ನ್ನು ಪರಿಷ್ಕರಿಸಿ 12,000 ರೂ.ಗೆ ಹೆಚ್ಚಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇತ್ತೀಚೆಗೆಷ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಿಸಿ ಆದೇಶ ಹೊರಡಿಸಲಾಗಿತ್ತು. ಅದರಂತೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಗೌರವ ಸಂಭಾವನೆಯನ್ನು 9,000 ರೂ.ನಿಂದ 15,000 ರೂ.ಗೆ ಹೆಚ್ಚಿಸುವಂತೆ ಸರ್ಕಾರಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಮನವಿ ಮಾಡಿ ಪ್ರಸ್ತಾವನೆ ಸಲ್ಲಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈಗ ಪಿಯು ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ಜೊತೆಗೆ ಗೌರವಧನ ಹೆಚ್ಚಿಸುವ ಸಂಬಂಧ ರಾಜ್ಯ ಸರ್ಕಾರ ಎರಡು ಮಹತ್ವದ ಆದೇಶ ಹೊರಡಿಸಿದೆ.