Tuesday, January 21, 2025
ಉಡುಪಿದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ 204 ಮಿ.ಮೀ ಗಿಂತ ಹೆಚ್ಚು ಮಳೆ ; ಮುಂದಿನ 24 ಗಂಟೆಯಲ್ಲಿ ಅಧಿಕ ಪ್ರಮಾಣದಲ್ಲಿ ಮಳೆ ಬೀಳುವ ಸಂಭವ – ಹವಾಮಾನ ಇಲಾಖೆ ಎಚ್ಚರಿಕೆ – ಕಹಳೆ ನ್ಯೂಸ್

ಮಂಗಳೂರು, ಜು 07 : ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಅಧಿಕ ಪ್ರಮಾಣದಲ್ಲಿ ಮಳೆ ಬೀಳುವ ಸಂಭವವಿದ್ದು ರಾಜ್ಯದ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆ ಮುಂದುವರಿಯಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಮೂರು ಜಿಲ್ಲೆಯಲ್ಲಿ 204 ಮಿ.ಮೀ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ಮತ್ತು ಶನಿವಾರದಂದು ಆರೆಂಜ್ ಅಲರ್ಟ್ ಘೋಷಿಸಿದೆ.ಈ ವೇಳೆ 115.6 ಮಿಮೀಯಿಂದ 204.4 ಮಿಮಿವರೆಗೆ ಮಳೆಯಾಗುವ ಸಾಧ್ಯತೆ ಇದೆ. ಈಗಾಗಲೇ ಕರಾವಳಿ ಜಿಲ್ಲೆಗಳಲ್ಲಿ ತೀವ್ರವಾಗಿ ಮಳೆಯಾಗುತ್ತಿದ್ದು, ರಸ್ತೆ ಸಂಪರ್ಕ ಕಡಿತ, ಮನೆಗಳಿಗೆ ಹಾನಿಯಾಗಿ ಜನಜೀವನ ಅಸ್ತವ್ಯಸ್ತಗೊಂಡು, ಹಲವೆಡೆ ಭಾರೀ ಹಾನಿ ಸಂಭವಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು