Recent Posts

Monday, January 20, 2025
ಅಂತಾರಾಷ್ಟ್ರೀಯಸುದ್ದಿ

ಗುಂಡೇಟಿನಿಂದ ಗಾಯಗೊಂಡಿದ್ದ ಜಪಾನ್ ಮಾಜಿ ಪ್ರಧಾನಿ ಶಿಂಝೊ ಅಬೆ ನಿಧನ – ಕಹಳೆ ನ್ಯೂಸ್

ಟೋಕಿಯೊ: ನಾರಾ ಪ್ರದೇಶದಲ್ಲಿ ಶುಕ್ರವಾರ ಪ್ರಚಾರ ಕಾರ್ಯಕ್ರಮವೊಂದರಲ್ಲಿ ತೊಡಗಿದ್ದಾಗ ದುಷ್ಕರ್ಮಿಯೊಬ್ಬನ ಗುಂಡೇಟಿಗೆ ತೀವ್ರ ಸ್ವರೂಪದಲ್ಲಿ ಗಾಯಗೊಂಡಿದ್ದ ಜಪಾನ್ ನಮಾಜಿ ಪ್ರಧಾನಿ ಶಿಂಝೊ ಅಬೆ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.

ಮಾಜಿ ಪ್ರಧಾನಿ ಅಬೆ ಅವರು ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದ ನಾರಾ ಪ್ರದೇಶದ ಕಾಶಿಹರಾ ನಗರದ ಆಸ್ಪತ್ರೆಯಲ್ಲಿ ನಿಧನರಾದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಅವರಿಗೆ 67 ವರ್ಷ ವಯಸ್ಸಾಗಿತ್ತು ಎಂದು ಹಿರಿಯ ಲಿಬರಲ್ ಡೆಮಾಕ್ರಟಿಕ್ ಪಾರ್ಟಿ ಅಧಿಕಾರಿ ತಿಳಿಸಿದ್ದಾರೆ ಎಂದು ಸಾರ್ವಜನಿಕ ಪ್ರಸಾರಕ NHK ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ.

ಅಬೆ ಮೇಲೆ ಎರಡು ಗುಂಡು ಹಾರಿಸಿದ 41 ವರ್ಷದ ವ್ಯಕ್ತಿ ಯಮಗಾಮಿ ತೆತ್ಸುಯಾನನ್ನು ಪೊಲೀಸರು ಬಂಧಿಸಿದ್ದಾರೆ. ದಾಳಿಯ ನಂತರ, ಆತನನ್ನು ತಕ್ಷಣವೇ ಬಂಧಿಸಲಾಯಿತು. ಆತ ಓಡಿಹೋಗುವ ಯಾವುದೇ ಪ್ರಯತ್ನವನ್ನು ಮಾಡಲಿಲ್ಲ.