Friday, January 24, 2025
ಉಡುಪಿಸುದ್ದಿ

ಉಡುಪಿ: ಹೆದ್ದಾರಿಯಲ್ಲಿ ಅಪಘಾತದಿಂದ ಸಾವು ಸಂಭವಿಸಿದರೆ ಅಧಿಕಾರಿಗಳ ಮೇಲೆ ಕೇಸ್ ದಾಖಲಿಸಿ: ಜಿಲ್ಲಾಧಿಕಾರಿ ಕೂರ್ಮಾ ರಾವ್ – ಕಹಳೆ ನ್ಯೂಸ್

ಉಡುಪಿ: ಹೆದ್ದಾರಿಯಲ್ಲಿ ಅವೈಜ್ಞಾನಿಕ ಕಾಮಗಾರಿಯ ಕಾರಣ ಅಪಘಾತಗಳು ಸಂಭವಿಸಿ, ಸಾವು ನೋವುಗಳಾದಲ್ಲಿ ಸಂಬಂಧಪಟ್ಟ ಹೆದ್ದಾರಿ ಅಧಿಕಾರಿಗಳ ಮೇಲೆ ಕೇಸು ದಾಖಲಿಸುವಂತೆ ಪೆÇಲೀಸ್ ಇಲಾಖೆಗೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಸೂಚನೆ ನೀಡಿದ್ದಾರೆ.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‍ನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 66 ಮತ್ತು 169 ಮತ್ತು 169 ಎ ರಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯಾಗಿರುವ ಮೂಲಭೂತ ಸಮಸ್ಯೆಗಳನ್ನು 10 ದಿನಗಳ ಒಳಗೆ ಸಂಪೂರ್ಣವಾಗಿ ಬಗೆಹರಿಸಿ, ಈ ಕುರಿತು ಪೂರ್ಣ ವರದಿಯನ್ನು ನೀಡುವಂತೆ ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಜಿಲ್ಲಾಡಳಿತ ಸೂಚಿಸುವ ಸಭೆಗಳಿಗೆ, ಜಿಲ್ಲಾ ಉಸ್ತುವಾರಿ ಸಚಿವರ ಸಭೆಗಳಿಗೂ ಸಹ ಗೈರು ಹಾಜರಾಗುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ಮತ್ತು ಇತರೆ ಕಾರ್ಯಗಳನ್ನು ಸುಗಮವಾಗಿ ಮಾಡಲು ಜಿಲ್ಲಾಡಳಿತದ ನೆರವು ಬೇಕಿದ್ದಲ್ಲಿ, ಜಿಲ್ಲಾಡಳಿತ ನೀಡುವ ಎಲ್ಲಾ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಮತ್ತು ಪ್ರಸ್ತುತ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಡು ಬರುತ್ತಿರುವ ಸಮಸ್ಯೆಗಳ ಕುರಿತು ನೀಡಿರುವ ಎಲ್ಲಾ ಸಮಸ್ಯೆಗಳನ್ನು 10 ದಿನದ ಒಳಗೆ ಸಂಪೂರ್ಣವಾಗಿ ಬಗೆ ಹರಿಸಿ, ಈ ಸಮಸ್ಯೆಗಳನ್ನು ಸರಿಪಡಿಸಿದ ದಿನಾಂಕ ಮತ್ತು ಸಮಯವನ್ನು ಒಳಗೊಂಡ ಕುರಿತು ಛಾಯಾಚಿತ್ರಗಳು ಹಾಗೂ ವರದಿಯನ್ನು ಸಲ್ಲಿಸಿ, ಮುಂದಿನ ಸಭೆಗೆ ಹಾಗೂ ಜಿಲ್ಲಾಡಳಿತ ಸೂಚಿಸುವ ಎಲ್ಲಾ ಸಭೆಗಳಿಗೆ ಕಡ್ಡಾಯವಾಗಿ ಹಾಜರಿರುವಂತೆ ಎಚ್ಚರಿಕೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಷ್ಟ್ರೀಯ ಹೆದ್ದಾರಿ ಪಕ್ಕದ ಚರಂಡಿಗಳಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ತೊಂದರೆ ಇರುವ ಅಡೆತಡೆಗಳನ್ನು ತಕ್ಷಣವೇ ಸರಿಪಡಿಸಬೇಕು. ತುರ್ತು ಅಗತ್ಯವಿರುವೆಡೆಗಳಲ್ಲಿ ತಕ್ಷಣವೇ ಬೀದಿ ದೀಪಗಳನ್ನು ಅಳವಡಿಸಬೇಕು. ಹೆದ್ದಾರಿ ಪಕ್ಕದಲ್ಲಿ ನೀರು ಹರಿಯಲು ವ್ಯವಸ್ಥೆ ಮಾಡಬೇಕು, ಸಂಚಾರಕ್ಕೆ ತಡೆ ಉಂಟು ಮಾಡುವ ಗಿಡಗಳನ್ನು ಕೂಡಲೇ ತೆರವುಗೊಳಿಸಬೇಕು. ಫ್ಲೈ ಓವರ್ ಗಳ ಮೇಲೆ ನೀರು ನಿಲ್ಲದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.

ಹೆದ್ದಾರಿಯ ಸಮಸ್ಯೆಗಳ ಬಗ್ಗೆ ಜಿಲ್ಲಾಡಳಿತ ಮತ್ತು ಸಾರ್ವಜನಿಕರು ಸಲ್ಲಿಸುವ ದೂರುಗಳನ್ನು ದಾಖಲಿಸಿ ಅವುಗಳಿಗೆ ಕಾಲಮಿತಿಯಲ್ಲಿ ಪರಿಹಾರ ಒದಗಿಸಬೇಕು. ಇದಕ್ಕಾಗಿ ದೂರು ನಿರ್ವಹಣಾ ವ್ಯವಸ್ಥೆಯನ್ನು ಅಳವಡಿಸಿಕೊಂಡು, ಅದರಲ್ಲಿ ದೂರುಗಳಿಗೆ ಸಂಬಂಧಪಟ್ಟ ಎಲ್ಲಾ ವಿವರಗಳನ್ನು ದಾಖಲಿಸಬೇಕು. ನಿಗಧಿತ ಅವಧಿಯೊಳಗೆ ಸಮಸ್ಯೆಗಳನ್ನು ಬಗೆಹರಿಸದ ಸಿಬ್ಬಂದಿಗಳ ವೇತನ ಮತ್ತು ಭತ್ಯೆಗಳನ್ನು ತಡೆ ಹಿಡಿಯುವಂತೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಎಎಸ್ಪಿ ಸಿದ್ದಲಿಂಗಪ್ಪ, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಲಿಂಗೇಗೌಡ, ನವಯುಗ ಮತ್ತು ಐಆರ್‍ಬಿ ಯ ಇಂಜನಿಯರ್ ಗಳು ಹಾಗೂ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.