Recent Posts

Sunday, January 19, 2025
ಸುದ್ದಿ

Breaking News : 2019ರ ಲೋಕಸಭೆ ಮುನ್ನ ರಾಮ ಮಂದಿರ ನಿರ್ಮಾಣ ಸಿಎಂ ಯೋಗಿ ಭರವಸೆ – ಕಹಳೆ ನ್ಯೂಸ್

ಈ ಬಾರಿಯ ಲೋಕಸಭೆ ಚುನಾವಣೆಯ ಒಳಗೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಲಿದೆ ಅದರೆ ಅಲ್ಲಿಯವರೆಗೆ ತಾಳ್ಮೆಯಿಂದ ಕಾಯಬೇಕು ಎಂದು ಹಿಂದೂ ಸಂತರಿಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಭರವಸೆ ನೀಡಿದ್ದಾರೆ.

ಅಯೋಧ್ಯೆಯಲ್ಲಿ ನಡೆದ ಹಿಂದೂ ಸಂತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ನಾವು ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಬದುಕುತ್ತಿದ್ದೇವೆ ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿ. 2019 ರ ಲೋಕಸಭಾ ಚುನಾವಣೆಯ ಮುಂಚಿತವಾಗಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುತ್ತೇವೆ ದೇಶದಲ್ಲಿ ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗ ಅದರದ್ದೇ ಕಾರ್ಯಗಳನ್ನು ಹೊಂದಿದ್ದು ನಾವು ಅದನ್ನು ಮನಸ್ಸಿನಲ್ಲಿರಿಸಿಕೊಳ್ಳಬೇಕಾಗಿದೆ’ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು