Recent Posts

Sunday, January 19, 2025
ದಕ್ಷಿಣ ಕನ್ನಡರಾಜ್ಯಸುದ್ದಿ

ನಾರಾಯಣಗುರುಗಳ ಪಠ್ಯ ಸಮಾಜ ವಿಜ್ಞಾನಕ್ಕೆ ವರ್ಗಾಯಿಸುವಂತೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರೊಂದಿಗೆ ಭೇಟಿಯಾಗಿ ಮನವಿ ಸಲ್ಲಿಸಿದ ಸಚಿವ ಸುನೀಲ್‌ ಕುಮಾರ್ – ಕಹಳೆ ನ್ಯೂಸ್

ಕಾರ್ಕಳ, ಜು 11 : ನಾರಾಯಣಗುರುಗಳ ಪಠ್ಯವನ್ನು ಸಮಾಜ ವಿಜ್ಞಾನ ವಿಷಯಕ್ಕೆ ವರ್ಗಾಯಿಸುವ ಕುರಿತು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವ ಸುನೀಲ್‌ ಕುಮಾರ್ ಕುಮಾರ್ ಅವರು ಪ್ರಥಾಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರನ್ನು ಭೇಟಿಯಾಗಿ ನಡವಳಿ ಸಲ್ಲಿಸಿದ್ದಾರೆ.


ಪ್ರಸಕ್ತ ಸಾಲಿನ ಪಠ್ಯ ಪುಸ್ತಕದಲ್ಲಿ ಬ್ರಹ್ಮಶ್ರೀ ಗುರುವರಾಯಣ ಗುರುಗಳ ಕುರಿತಂತೆ ಅಳವಡಿಸಲಾಗಿದ್ದ ವಿಷಯಗಳ ಬಗ್ಗೆ ಗೊಂದಲಗಳು ನಿರ್ಮಾಣವಾಗಿದೆ. ಬ್ರಹ್ಮ ಶ್ರೀ ನಾರಾಯಣಗುರುಗಳ ವಿಷಯಗಳು ಈ ಹಿಂದೆ ಸಮಾಜ ವಿಜ್ಞಾನ ವಿಷಯದಲ್ಲಿ ಇದ್ದು, ಅದನ್ನು ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದರು, ಈ ವರ್ಷದಿಂದ ಅದನ್ನು ಕನ್ನಡ ವಿಷಯಕ್ಕೆ ವರ್ಗಾಯಿಸಲಾಗಿದೆ. ಕನ್ನಡ ವಿಷಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಪಠ್ಯವನ್ನು ಸೇರಿಸಿರುವುದರ ಬಗ್ಗೆ ಹಲವು ಅಕ್ಷೇಪಗಳು ವ್ಯಕ್ತವಾಗುತ್ತಿವೆ. ಕನ್ನಡದ ಬದಲು ಸಮಾಜ ವಿಜ್ಞಾನದಲ್ಲಿದ್ದರೆ ಎಲ್ಲಾ ವಿದ್ಯಾರ್ಥಿಗಳು ಅಭ್ಯಾಸ ಮಾಡುವುದಕ್ಕೆ ಸಾಧ್ಯವಾಗುತ್ತದೆ. ಅದು ಸರ್ವ ಸಮ್ಮತವಾಗಿರುತ್ತದೆ ಎಂಬುದು ವಿವಿಧ ಸಂಘಟನೆಗಳ ಹಾಗೂ ರಾಜ್ಯದ ಗಣರ ಅಭಿಪ್ರಾಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕನ್ನಡ ಭಾಷಾ ವಿಷಯವನ್ನು ಎಲ್ಲರೂ ಆಭ್ಯಾಸ ಮಾಡಲು ಸಾಧ್ಯವಿಲ್ಲ. ಇದರಿಂದಾಗಿ ಬೇರೆ ಮಾಧ್ಯಮದ ವಿದ್ಯಾರ್ಥಿಗಳು ಬ್ರಹ್ಮಶ್ರೀ ನಾರಾಯಣಗುರುಗಳ ಪಠ್ಯವನ್ನು ಅರಿತುಕೊಳ್ಳಲು ವಂಚಿತರಾಗಿರುತ್ತಾರೆ ಎಂದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕನ್ನಡದ ಬದಲು ಸಮಾಜ ವಿಜ್ಞಾನದಲ್ಲಿ ಎಲ್ಲಾ ಭಾಷಾ ಮಾಧ್ಯಮದ ವಿದ್ಯಾರ್ಥಿಗಳಿಗೆ ನಾರಾಯಣಗುರುಗಳ ಆದರ್ಶಗಳು ತಿಳಿಯಬೇಕೆಂದಾದಲ್ಲಿ, ಸಮಾಜ ವಿಜ್ಞಾನ ವಿಷಯಕ್ಕೆ ಸೇರಿಸುವುದು ಸೂಕ್ತವೆಂಬುದು ನಾಡಿನ ಅನೇಕ ಶೈಕ್ಷಣಿಕ ಬಲ ಹಾಗೂ ಹಿರಿಯರ ಒತ್ತಾಸೆಯಾಗಿದೆ. ಆದುದರಿಂದ ಬ್ರಹ್ಮಶ್ರೀ ನಾರಾಯಣಗುರುಗಳ ಪಠ್ಯವನ್ನು ಸಮಾಜ ವಿಜ್ಞಾನ ವಿಷಯಕ್ಕೆ ವರ್ಗಾಯಿಸಲು ಅದನ್ನು ತೀವ್ರವಾಗಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಉಪಸ್ಥಿತರಿದ್ದರು.