Recent Posts

Sunday, January 19, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸೂರಿಕುಮೇರ್: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಡ್ಡ ಕುಸಿದು ಹೆದ್ದಾರಿ ಸಂಚಾರ ಅಸ್ತವ್ಯಸ್ತ- ಕಹಳೆ ನ್ಯೂಸ್

ವಿಟ್ಲ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರ್ ಎಂಬಲ್ಲಿ ಗುಡ್ಡ ಕುಸಿದು ಹೆದ್ದಾರಿಗೆ ಮಣ್ಣು ಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ಹೆದ್ದಾರಿ ಕಾಮಗಾರಿ ನಡೆಯುವುದರಿಂದ ಕೆಲವು ಗುಡ್ಡಗಳನ್ನು ಅಗೆದು ಅಧರ್ಂಬರ್ಧ ಕಾಮಗಾರಿ ನಡೆಸಲಾಗಿತ್ತು. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಸೂರಿಕುಮೇರು ಎಂಬಲ್ಲಿ ಗುಡ್ಡ ಕುಸಿದು ರಸ್ತೆಗೆ ಬಿದ್ದಿದೆ. ಇದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಬಳಿಕ ಸ್ಥಳೀಯರು ಮಣ್ಣನ್ನು ತೆರವುಗೊಳಿಸಲು ಯತ್ನಿಸುತ್ತಿದ್ದು, ಇದೀಗ ಒಂದು ಬದಿಯಲ್ಲಿ ಮಾತ್ರ ವಾಹನ ಸಂಚಾರ ಪ್ರಾರಂಭಗೊಂಡಿದ್ದು, ಅಲ್ಪ ಹೊತ್ತಿನಲ್ಲಿ ತೆರವು ಕಾರ್ಯಾಚರಣೆ ಸಂಪೂರ್ಣ ಗೊಳ್ಳುವ ನಿರೀಕ್ಷೆ ಇದೆ.