Friday, November 22, 2024
ದಕ್ಷಿಣ ಕನ್ನಡಪುತ್ತೂರುಸುದ್ದಿ

ಎನ್.ಡಿ.ಎ ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ತಿಯಾನಂದ್ ಉತ್ತೀರ್ಣ – ಕಹಳೆ ನ್ಯೂಸ್

ಪುತ್ತೂರು: 2022ನೇ ಸಾಲಿನಲ್ಲಿ ಕೇಂದ್ರ ಸರಕಾರದ ಲೋಕ ಸೇವಾ ಆಯೋಗ ನಡೆಸಿದ ಎನ್.ಡಿ.ಎ. (ನ್ಯಾಷನಲ್ ಡಿಫೆನ್ಸ್ ಅಕಾಡಮಿ) ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿ ತಿಯಾನಂದ್ ಎಂ ರವರು 237ನೇ ರ್ಯಾಂಕ್ ಗಳಿಸಿ ಮುಂದಿನ ಹಂತವಾದ ದೈಹಿಕ ಪರೀಕ್ಷೆಯಲ್ಲೂ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿ, ಸರ್ವಿಸ್ ಸೆಲೆಕ್ಷನ್ ಬೋರ್ಡ್ (SSB) ನಡೆಸುವ ಮೌಖಿಕ ಸಂದರ್ಶನದಲ್ಲಿಯೂ ಉತ್ತೀರ್ಣರಾಗಿದ್ದಾರೆ.

ಚಿನ್ನಾಲಪಟ್ಟಿಯ ಪಿ. ಮುರುಗನ್ ಮತ್ತು ರೇಣುಕಾ ಎಂ ದಂಪತಿಗಳ ಪುತ್ರನಾಗಿರುವ ತಿಯಾನಂದ್ ಎಂ ರಾಷ್ಟ್ರಮಟ್ಟದಲ್ಲಿ ನಡೆಯುವ ಸಂದರ್ಶನದಲಿ ಆಯ್ಕೆಯಾಗಿರುವುದು ಗಮನಾರ್ಹ ಅಂಶ.

ಜಾಹೀರಾತು
ಜಾಹೀರಾತು
ಜಾಹೀರಾತು

ತಿಯಾನಂದ್ ಎಂ. ರವರು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಎನ್.ಸಿ.ಸಿ. ವಿದ್ಯಾರ್ಥಿಯಾಗಿದ್ದು, ಕಾಲೇಜಿನ ಕೋಚಿಂಗ್ ಸೆಲ್ ನಡೆಸುವ ತರಗತಿಗಳಲ್ಲಿ ತರಬೇತಿ ಪಡೆದಿದ್ದರು. ಈ ಪರೀಕ್ಷೆಯ ಪ್ರಶ್ನೆ ಪತ್ರಿಕೆಯು ಸಾಮಾನ್ಯ ಅರ್ಹತಾ ಪ್ರಶ್ನೆಗಳನ್ನು ಒಳಗೊಂಡಿತ್ತು. ವಿದ್ಯಾರ್ಥಿಯ ಈ ವಿಶೇಷ ಸಾಧನೆಗಾಗಿ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದದವರು ಅಭಿನಂದಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು