Monday, January 20, 2025
ಸುದ್ದಿ

ಗೃಹ ಪ್ರವೇಶಕ್ಕೆ ಸಜ್ಜಾಗಿದ್ದ ಮನೆ ಗುಡ್ಡ ಕುಸಿತದಿಂದ ಸಂಪೂರ್ಣ ನೆಲಸಮ..!- ಕಹಳೆ ನ್ಯೂಸ್

ಗೃಹ ಪ್ರವೇಶಕ್ಕೆ ಸಿದ್ಧವಾದ ಮನೆ ಗುಡ್ಡ ಕುಸಿತದಿಂದ ಸಂಪೂರ್ಣ ನೆಲಸಮವಾದ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ತಾಲೂಕಿನ ಹರಿಹರ ಪಲ್ಲತಡ್ಕದ ಬಳಿ ಮೂರು ದಿನದ ಹಿಂದೆ ಮರ ಬಿದ್ದು ಮನೆ ಗೋಡೆಗಳಲ್ಲಿ ಬಿರುಕು ಮೂಡಿತ್ತು. ಆದರೆ ಬಿರುಕು ಬಿಟ್ಟಿದ್ದ ಗೋಡೆಯ ದುರಸ್ತಿ ಕಾಯ್ ಮಾಡಿ ಮತ್ತೆ ಗೃಹ ಪ್ರವೇಶಕ್ಕೆ ಸಜ್ಜು ಮಾಡಲಾಗಿತ್ತು. ಜುಲೈ 18ರಂದು ಈ ಮನೆಯ ಗೃಹಪ್ರವೇಶಕ್ಕೆ ದಿನಾಂಕ ನಿಗದಿಪಡಿಸಲಾಗಿತ್ತು. ಈ ಹಿನ್ನೆಲೆ ಎಲ್ಲಾ ತಯಾರಿಯನ್ನು ಕೂಡ ಮಾಡಲಾಗಿತ್ತು. ಆದರೆ ಭಾರೀ ಮಳೆಯಿಂದ ಗುಡ್ಡ ಕುಸಿದು ಮನೆ ಸಂಪೂರ್ಣ ನೆಲಸಮವಾಗಿದೆ. ಕಷ್ಟಪಟ್ಟು ಕಟ್ಟಿದ್ದ ಮನೆ ಗೃಹಪ್ರವೇಶಕ್ಕೆ ಮೊದಲೇ ನೆಲಸಮವಾಗಿದ್ದರಿಂದ ಮನೆಯವರು ಕಂಗಾಲಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು