Recent Posts

Monday, January 20, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ 2021-22ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆ – ಕಹಳೆ ನ್ಯೂಸ್

ಪುತ್ತೂರು: 2021-22 ನೇ ಸಾಲಿನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಯ ಸಲುವಾಗಿ ಚುನಾವಣೆ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ದ್ವಿತೀಯ ವಿಜ್ಞಾನ ವಿಭಾಗದ ಮಹೇಶ್ ಪ್ರಸಾದ್ ಕಾರ್ಯದರ್ಶಿಯಾಗಿ ದ್ವಿತೀಯ ವಿಜ್ಞಾನ ವಿಭಾಗದ ದೀಕ್ಷ ಎಸ್. ಜೊತೆ ಕಾರ್ಯದರ್ಶಿಯಾಗಿ ಪ್ರಥಮ ವಿಜ್ಞಾನ ವಿಭಾಗದ ಚೈತ್ರಾ ಸಿ.ಕೆ. ಚುನಾಯಿತರಾದರು. ಕ್ರೀಡಾ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ದ್ವಿತೀಯ ವಾಣಿಜ್ಯ ವಿಭಾಗದ ತೇಜಸ್ ಎ.ಎಮ್ ಮತ್ತು ಕಾರ್ಯದರ್ಶಿಯಾಗಿ ಸುಪ್ರೀತಾ ಕೆ. ಸಹಸಂಯೋಜಕರಾಗಿ ಪ್ರಥಮ ವಾಣಿಜ್ಯ ವಿಭಾಗದ ಯಶಸ್ವಿನಿ ಆಯ್ಕೆಯಾದರು.

ಈ ಪ್ರಕ್ರಿಯೆಯನ್ನು ನರೇಂದ್ರ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್‍ಇವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿ ಕ್ಷೇಮಪಾಲಕರಾದ ಮಧುರಾ ಇವರು ನಡೆಸಿಕೊಟ್ಟರು. ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ಸಹಕರಿಸಿದರು.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು ಶುಭಹಾರೈಸಿ, ಸರಿಯಾದ ಮಾರ್ಗದರ್ಶನ ಪಡೆದುಕೊಳ್ಳುತ್ತಾ, ಸಂಸ್ಥೆಯ ಏಳಿಗೆಗೆ ಪೂರಕವಾಗಿ ನಡೆದುಕೊಂಡು ಉತ್ತಮ ನಾಯಕತ್ವಗುಣ ಬೆಳೆಸಿಕೊಂಡು ಮುಂದುವರಿಯಬೇಕು ಎಂದು ನುಡಿದರು.