Recent Posts

Sunday, January 19, 2025
ಸುದ್ದಿ

ಮುಲ್ಕಿ: ನಾಳೆ ಪಂಜ ಗ್ರಾಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಗ್ರಾಮ ವಾಸ್ತವ್ಯ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ನಾಳೆ ಮುಲ್ಕಿ ತಾಲೂಕಿನ ಪಂಜ ಗ್ರಾಮದ ವಿಠೋಭ ಭಜನಾ ಮಂದಿರದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

ಈ ಹಿನ್ನಲೆಯಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಪ್ರತಿಯೊಂದು ಸರ್ವೇ ಮಾಡಿಸಿ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಸ್ವೀಕರಿಸುವಂತೆ ಸೂಚಿಸಲಾಗಿದೆ. ಸಾರ್ವಜನಿಕರು ನೇರವಾಗಿ ತಮ್ಮ ಅಹವಾಲುಗಳನ್ನು ನೀಡಲು ಬಯಸಿದ್ದಲ್ಲೀ, ಪಂಜ ಗ್ರಾಮ ಪಂಚಾಯತ್‍ಗೆ ನೀಡಬಹುದಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಈ ಸಂರ್ಭದಲ್ಲಿ ಜಿಲ್ಲಾಧಿಕಾರಿಗಳ ಜತೆಯಲ್ಲಿದ್ದು, ಸಮಸ್ಯೆಗಳನ್ನು ಅದಷ್ಟು ಸ್ಥಳದಲ್ಲಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು.

ಜಾಹೀರಾತು
ಜಾಹೀರಾತು
ಜಾಹೀರಾತು

ಯಾವುದೇ ಸಮಸ್ಯೆ ಸ್ಥಳದಲ್ಲಿ ಬಗೆಹರೆಯದಲ್ಲಿ ಮುಂದಿನ ಸೂಕ್ತವಾದ ದಿನವನ್ನು ನಿರ್ಧರಿಸಿ ಅದೇ ಗ್ರಾಮದಲ್ಲಿಯೇ ಮತ್ತೊಮ್ಮೆ ಗ್ರಾಮ ವಾಸ್ತವ್ಯ ನಡೆಸಲು ನಿರ್ಧರಿಸಲಾಗುತ್ತದೆ.

ಈ ಸಮಯದಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಕೋವಿಡ್ ನಿಯಮ ಪಾಲನೆ ಮಾಡುವಂತೆ ಅಪರ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.