Recent Posts

Friday, November 22, 2024
ಸುದ್ದಿ

ಮತ್ತೇ ಕುಸಿದ ಶಿರಾಡಿ ಮತ್ತು ಚಾರ್ಮಾಡಿ ಘಾಟ್ ರಸ್ತೆ – ಕಹಳೆ ನ್ಯೂಸ್

ರಾಜ್ಯದ ಬಯಲುಸೀಮೆಯನ್ನು ಕರಾವಳಿಯೊಂದಿಗೆ ಸಂಪರ್ಕಿಸುವ ಶಿರಾಡಿ ಮತ್ತು ಚಾರ್ಮಾಡಿ ಘಾಟ್ ರಸ್ತೆಗಳಲ್ಲಿ ಮತ್ತೆ ರಸ್ತೆ ಕುಸಿತವಾಗಿದ್ದು, ಸಂಚಾರ ಬಂದ್ ಆಗುವ ಭೀತಿ ಎದುರಾಗಿದೆ. ರಾಜ್ಯ ರಾಜಧಾನಿ ಬೆಂಗಳೂರು ಮತ್ತು ಕರಾವಳಿ ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬರುವ ಶಿರಾಡಿ ಘಾಟ್‍ನ ದೋಣಿಗಲ್‍ನಲ್ಲಿ ವಾರದ ಬಳಿಕ ಮತ್ತೆ ರಸ್ತೆ ಕುಸಿತವಾಗಿದೆ.

ಇದರಿಂದಾಗಿ ಅಲ್ಲಿ ಭಾರಿ ವಾಹನ ಸಂಚಾರ ನಿಷೇಧಿಸಲಾಗಿದೆ. ಇಲ್ಲಿ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಏಕಮುಖ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಉಳಿದಂತೆ ಸಂಜೆ 6ರಿಂದ ಬೆಳಗ್ಗೆ 6ರ ವರೆಗೆ ಎಲ್ಲ ಸರ್ಕಾರಿ ಹಾಗೂ ಖಾಸಗಿ ಬಸ್‍ಗಳು, ಕಾರು, ಜೀಪು, ದ್ವಿಚಕ್ರ ವಾಹನ ಹಾಗೂ ತುರ್ತು ವಾಹನಗಳಿಗೆ ಮಾತ್ರ ದ್ವಿಮುಖ ಸಂಚಾರಕ್ಕೆ ಅನುಮತಿಸಲಾಗಿದೆ. ಭಾರಿ ಮಳೆ ಮುಂದುವರಿದರೆ ಘಾಟ್ ಪ್ರದೇಶ ಸಂಚಾರ ಪೂರ್ತಿ ಬಂದ್ ಆಗುವ ಭೀತಿ ಎದುರಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಶಿರಾಡಿ ಘಾಟ್ ರಸ್ತೆಗೆ ಪರ್ಯಾಯ ರಸ್ತೆಯಾಗಿರುವ ರಾಷ್ಟ್ರೀಯ ಹೆದ್ದಾರಿ 73ರ ಚಾರ್ಮಾಡಿ ಘಾಟ್‍ನ ಸೋಮನಕಾಡು ಸಮೀಪ ರಸ್ತೆಗೆ ಗುಡ್ಡ ಕುಸಿದ ಹಿನ್ನೆಲೆಯಲ್ಲಿ ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ವಾಹನಗಳು ಸಾಲುಗಟ್ಟಿನಿಂತಿದ್ದವು. ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ರಸ್ತೆಗೆ ಬಿದ್ದ ಮಣ್ಣು ಹಾಗೂ ಬಂಡೆಯನ್ನು ತೆರವುಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಇಲ್ಲಿ ಆಗಾಗ ಗುಡ್ಡ ಕುಸಿತ ಹಾಗೂ ಮರ ಬೀಳುವ ಹಿನ್ನೆಲೆಯಲ್ಲಿ ಮೂರು ಜೆಸಿಬಿ ಯಂತ್ರಗಳು ಸ್ಥಳದಲ್ಲೇ ಬೀಡುಬಿಟ್ಟಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಶಿರಾಡಿ ಘಾಟ್ ರಸ್ತೆ ಕುಸಿತ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಭಾರಿ ವಾಹನ ಸಂಚಾರ ನಿಷೇಧಿಸಿ ಹಾಸನ ಜಿಲ್ಲಾಡಳಿತ ಗುರುವಾರ ಆದೇಶ ಹೊರಡಿಸಿದೆ. ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ಏಕಮುಖ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಉಳಿದಂತೆ ಸಂಜೆ 6ರಿಂದ ಬೆಳಗ್ಗೆ 6ರ ವರೆಗೆ ಎಲ್ಲ ಸರ್ಕಾರಿ ಹಾಗೂ ಖಾಸಗಿ ಬಸ್‍ಗಳು, ಕಾರು, ಜೀಪು, ದ್ವಿಚಕ್ರ ವಾಹನ ಹಾಗೂ ತುರ್ತು ವಾಹನಗಳು(ಆ್ಯಂಬುಲೆನ್ಸ್, ಅಗ್ನಿಶಾಮಕ ವಾಹನ)ಮಾತ್ರ ಸಂಚರಿಸಲು ಅನುಮತಿಸಲಾಗಿದೆ.