Recent Posts

Sunday, January 19, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ :ಜೇನು ತುಪ್ಪವೆಂದು ನಂಬಿಸಿ ಬೆಲ್ಲದ ಪಾಕ ಮಾರಾಟ: ಸಾರ್ವಜನಿಕರಿಂದ ಬಿತ್ತು ಧರ್ಮದೇಟು – ಕಹಳೆ ನ್ಯೂಸ್

ಬಂಟ್ವಾಳ : ಕಟ್ಟಡದ ಮೇಲೆ ಕಟ್ಟಿದ್ದ ಜೇನುಗೂಡಿಂದ ಜೇನು ತೆಗೆದು ಕೊಡುತ್ತೇವೆ ಎಂದು ಜನರನ್ನು ವಂಚಿಸಿ ಬೆಲ್ಲದ ಪಾಕ ಮಾರಾಟ ಮಾಡುತ್ತಿದ್ದ ನಕಲಿ ಜೇನು ಮಾರಾಟಗಾರರ ತಂಡಕ್ಕೆ ಜನರು ಧರ್ಮದೇಟು ನೀಡಿ ಓಡಿಸಿದ ಘಟನೆ ಬಿ.ಸಿ.ರೋಡ್ ಸಮೀಪದ ಕೈಕಂಬದಲ್ಲಿ ನಡೆದಿದೆ.

ಕೈಕಂಬದ ಜಂಕ್ಷನ್ ನಲ್ಲಿ ಬಹುಮಹಡಿಯ ಕಟ್ಟಡದಲ್ಲಿ ಬೃಹತ್ ಜೇನುಗೂಡೊಂದು ಕಟ್ಟಿದ್ದು, ಜೇನು ಗೂಡನ್ನು ತೆರವುಗೊಳಿಸಿಕೊಡುವುದಾಗಿ ಅನ್ಯರಾಜ್ಯದ ಕಾರ್ಮಿಕರ ತಂಡ ಆಗಮಿಸಿತ್ತು. ಇತ್ತೀಚೆಗಷ್ಟೆ ಗೂಡು ಕಟ್ಟಿದ್ದರಿಂದ ಅದರಲ್ಲಿ ಜೇನು ಸಂಗ್ರಹಗೊಂಡಿರಲಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ನಡುವೆ ತಂಡ ಬೆಲ್ಲಪಾಕ ಹಾಗೂ ಜೇನು ಮೇಣವನ್ನು ಮೊದಲೇ ಸಿದ್ಧಪಡಿಸಿಟ್ಟುಕೊಂಡು ಈಗಷ್ಟೆ  ತೆಗೆದ ಜೇನು ತುಪ್ಪ ಎಂದು ಜನರನ್ನು ನಂಬಿಸಿ, ಮಾರಾಟ ಮಾಡಿ ಹಣ ಸಂಪಾದಿಸಿದ್ದರು.
ಕೆಲಹೊತ್ತಿನಲ್ಲಿಯೇ ಇದು ಬೆಲ್ಲದ ಪಾಕ ಎಂದು ಅರಿವಾಗಿ ಆಕ್ರೋಶಿತ ಸಾರ್ವಜನಿಕರು ಕಾರ್ಮಿಕರನ್ನು ತರಾಟೆಗೆ ತೆಗೆದುಕೊಂಡರಲ್ಲದೆ, ಇನ್ನು ಎಲ್ಲೂ ನಕಲಿ ಜೇನುತುಪ್ಪ ಮಾರಾಟ ಮಾಡದಂತೆ ಎಚ್ಚರಿಕೆ ನೀಡಿ ಓಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು