Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಗುರುಪೂರ್ಣಿಮೆ ಆಚರಣೆ : “ನಮ್ಮೊಳಗಿನ ಅರಿವೇ ನಿಜವಾದ ಗುರು” : ವಿದ್ವಾನ್ ತೇಜಶಂಕರ ಸೋಮಯಾಜಿ – ಕಹಳೆ ನ್ಯೂಸ್

ಪುತ್ತೂರು: ನಮ್ಮೊಳಗಿನ ಅರಿವೇ ನಮ್ಮ ನಿಜವಾದ ಗುರು. ನಾವು ಆತ್ಮಜ್ಞಾನವನ್ನು ಬೆಳೆಸಿಕೊಂಡು, ನಮ್ಮ ಅಂತರಾತ್ಮವನ್ನು ಪರಿಶುದ್ಧವಾಗಿಟ್ಟುಕೊಂಡಾಗ ನಮ್ಮೊಳಗಿನ ಗುರುವಿನ ದರ್ಶನವಾಗುತ್ತದೆ. ನಮ್ಮ ಆತ್ಮಶಕ್ತಿಯನ್ನು ಜಾಗೃತಗೊಳಿಸಿ ನಮ್ಮ ಅನುಭವಗಳನ್ನು ಗುರುವೆಂದು ಬಗೆದು ನಮ್ಮನ್ನು ನಾವೇ ಉದ್ಧಾರದ ಹಾದಿಯಲ್ಲಿ ಮುನ್ನಡೆಸಬೇಕು ಎಂದು ಅಂಬಿಕಾ ಮಹಾವಿದ್ಯಾಲಯದ ತತ್ವಶಾಸ್ತ್ರ ವಿಭಾಗದ ಮುಖ್ಯಸ್ಥ ವಿದ್ವಾನ್ ತೇಜಶಂಕರ ಸೋಮಯಾಜಿ ಹೇಳಿದರು.

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಬುಧವಾರ ಗುರುಪೂರ್ಣಿಮೆ ಪ್ರಯುಕ್ತ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ನಮ್ಮ ವೇದ ಉಪನಿಷತ್ತುಗಳು ಹೇಳುವಂತೆ ತಾಯಿಯೇ ಮೊದಲ ಗುರು. ಆದ್ದರಿಂದ ತಾಯಿಯನ್ನು ಪೂಜನೀಯ ಭಾವನೆಯಲ್ಲಿ ಕಾಣಬೇಕು ಮತ್ತು ನಮ್ಮ ಗುರು ಹಿರಿಯರೊಡನೆ ವಿಧಯತೆಯಿಂದ ನಡೆದುಕೊಳ್ಳಬೇಕು ಎಂದರಲ್ಲದೆ ನಮ್ಮ ಮಹಾಗ್ರಂಥಗಳಲ್ಲಿ ಒಂದಾದ ಮಹಾಭಾರತವನ್ನು ಬರೆದ ವೇದವ್ಯಾಸರ ಜಯಂತಿಯನ್ನು ಗುರು ಪೂರ್ಣಿಮೆ ಎಂದು ಆಚರಿಸುವುದು ನಮ್ಮೆಲ್ಲರ ಭಾಗ್ಯ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯೆ ಸುಚಿತ್ರ ಪ್ರಭು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕಿ ಗೀತಾ ಸಿ ಕೆ ಕಾರ್ಯಕ್ರಮವನ್ನು ನಿರೂಪಿಸಿದರು.