Recent Posts

Monday, January 20, 2025
ಸುದ್ದಿ

ರಾಜರ್ಷಿ ಡಾ! ಡಿ.ವೀರೇಂದ್ತ ಹೆಗ್ಗಡೆಯವರಿಗೆ ಉಡುಪಿ ಜಿಲ್ಲಾ ಬಿಜೆಪಿಯಿಂದ ಅಭಿನಂದನೆ– ಕಹಳೆ ನ್ಯೂಸ್

ನೂತನ ರಾಜ್ಯ ಸಭಾ ಸದಸ್ಯರಾಗಿ‌ ನಾಮಕರಣಗೊಂಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ! ಡಿ‌.ವೀರೇಂದ್ರ ಹೆಗ್ಗಡೆಯವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ನೇತೃತ್ವದಲ್ಲಿ‌ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜು.16ರಂದು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ‌ ಮಟ್ಟಾರ್ ರತ್ನಾಕರ ಹೆಗ್ಡೆ, ಶಾಸಕ ಕೆ.ರಘುಪತಿ ಭಟ್, ಕರ್ನಾಟಕ ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಎ.ಕಿರಣ್ ಕೊಡ್ಗಿ, ಮಾಜಿ ಸಚಿವ ಪ್ತಮೋದ್ ಮಧ್ವರಾಜ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು,‌‌ ರಾಜ್ಯ ಮಹಿಳಾ ಮೋರ್ಚಾ ಪ್ತಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಉಡುಪಿ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಹಾಗೂ ನಗರಸಭಾ ಸದಸ್ಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು