Sunday, January 19, 2025
ದಕ್ಷಿಣ ಕನ್ನಡಬೆಂಗಳೂರುರಾಷ್ಟ್ರೀಯಸುದ್ದಿ

ರಾಷ್ಟ್ರಪತಿ ಚುನಾವಣೆ ಆರಂಭ ; ದೇಶಾದ್ಯಂತ ಸಂಸದರು, ಶಾಸಕರಿಂದ ಮತದಾನ – ಕಹಳೆ ನ್ಯೂಸ್

ನವದೆಹಲಿ, ಜು 18 : ದೇಶದ ಪ್ರಥಮ ಪ್ರಜೆಯ ಆಯ್ಕೆಯ ಚುನಾವಣೆ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ್ಯಂತ ಸಂಸದರು, ಶಾಸಕರು ಮತ ಚಲಾಯಿಸುತ್ತಿದ್ದಾರೆ.


ದೇಶದ ಸುಮಾರು 4,800 ಚುನಾಯಿತ ಜನ ಪ್ರತಿನಿಧಿಗಳು 15ನೇ ರಾಷ್ಟ್ರಪತಿ ಆಯ್ಕೆ ಮಾಡಲು ಮತದಾನ ಮಾಡಲಿದ್ದು, ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಮತ್ತು ವಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಕಣದಲ್ಲಿ ಇದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಸಂಸತ್ ಭವನ ಹಾಗೂ ರಾಜ್ಯಗಳ ವಿಧಾನಸಭೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ಚುನಾವಣೆ ನಡೆಯಲಿದ್ದು, ಜುಲೈ 21 ರಂದು ಸಂಸತ್ ಭವನದಲ್ಲಿ ಮತ ಎಣಿಕೆ ನಡೆದು, ಜುಲೈ 25 ರಂದು ಮುಂದಿನ ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು